ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ ಆದೇಶ

ಇಂದು ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, "ಶಾಸಕರು ಎತ್ತಿರುವ ವಿಷಯದ ಬಗ್ಗೆ, ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ ಎಂದರು.
Home Minister
ಗೃಹ ಸಚಿವ ಜಿ ಪರಮೇಶ್ವರ
Updated on

ಬೆಂಗಳೂರು: ಮಾರ್ಚ್ 9 ರಂದು ನೆರೆಯ ತಮಿಳುನಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದ ಆನೇಕಲ್‌ನ ರಿಯಲ್ ಎಸ್ಟೇಟ್ ಉದ್ಯಮಿಯ ಅಪಹರಣ ಮತ್ತು ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವುದಾಗಿ ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, "ಶಾಸಕರು ಎತ್ತಿರುವ ವಿಷಯದ ಬಗ್ಗೆ, ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಮತ್ತು ಇತರರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದರು.

ನಮಗೆ ಬಂದಿರುವ ಆರಂಭಿಕ ವರದಿಗಳ ಆಧಾರದ ಮೇಲೆ, ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ ಹಸ್ತಾಂತರಿಸುವಂತೆ ನಾನು ಸೂಚಿಸಿದ್ದೇನೆ. ತನಿಖೆಯನ್ನು ಅವರೇ ಮಾಡುತ್ತಾರೆ ಎಂದು ಪರಮೇಶ್ವರ ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ ಈಶ್ವರ್, ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸುವಂತೆ ಗೃಹ ಸಚಿವರನ್ನು ಈ ಹಿಂದೆ ಒತ್ತಾಯಿಸಿದ್ದರು.

Home Minister
ಬೆಂಗಳೂರು: ಕಿಡ್ನ್ಯಾಪ್ ಆಗಿದ್ದ ವ್ಯಕ್ತಿ ತಮಿಳುನಾಡಿನಲ್ಲಿ ಶವವಾಗಿ ಪತ್ತೆ; ಒಬ್ಬನ ಬಂಧನ

"ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಮತ್ತು ಇಬ್ಬರು ಶಂಕಿತರು ಇನ್ನೂ ತಲೆಮರೆಸಿಕೊಂಡಿದ್ದಾರೆ. ಅವರನ್ನು ಆದಷ್ಟು ಬೇಗ ಬಂಧಿಸಬೇಕು" ಎಂದು ಅವರು ಹೇಳಿದರು.

ಕಳೆದ ಭಾನುವಾರ ಬೆಂಗಳೂರಿನ ಹೊರ ವಲಯದಲ್ಲಿ ಸಿನಿಮಾ ಸ್ಟೈಲ್​​ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಗೋಪಾಲ್ ಅಲಿಯಾಸ್ ಗೋಪಿ ಸೋಮವಾರ ತಮಿಳುನಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸರ ಪ್ರಕಾರ, ಭಾನುವಾರ, ಗೋಪಾಲ್ ಮತ್ತು ಅವರ ಸ್ನೇಹಿತ ಸತೀಶ್ ಅತ್ತಿಬೆಲೆಯಿಂದ ಆನೇಕಲ್ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಆನೇಕಲ್ ತಾಲ್ಲೂಕಿನ ಕರ್ಪುರ ಗೇಟ್ ಬಳಿ ಗೋಪಿ ಅವರನ್ನು ಅಪಹರಿಸಲಾಗಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕನಿಕೊಟ್ಟೈ ಬಳಿಯ ಅರಣ್ಯ ಪ್ರದೇಶಕ್ಕೆ ಅವರನ್ನು ಕರೆದೊಯ್ದು, ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com