ಡಿಕೆಶಿಗೆ ಉಜ್ವಲ ರಾಜಕೀಯ ಭವಿಷ್ಯವಿದೆ ಎನ್ನುತ್ತಾ ಹೊಸ ಟ್ವಿಸ್ಟ್ ನೀಡಿದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಅವರಿಗೆ ಈ ಬಾರಿ ಮುಖ್ಯಮಂತ್ರಿ ಪಟ್ಟ ಇಲ್ಲ. 2028ರಲ್ಲಿ ಸಿಗಬಹುದು ಎಂಬುದನ್ನು ಸೂಚ್ಯವಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
DK Shivakumar with CM Siddaramaiah
ಸಿಎಂ ಸಿದ್ದರಾಮಯ್ಯ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂದಿದ್ದಾರೆ.

ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ. ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ ಎಂದು ಶ್ಲಾಘಿಸಿದ್ದಾರೆ.

ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ ಎಂದು ತಿಳಿಸಿದ್ದಾರೆ.

ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂದು ಹೇಳಿದ್ದಾರೆ.

DK Shivakumar with CM Siddaramaiah
Watch | ಡಿಕೆಶಿ 'ಕೊಟ್ಟ ಮಾತಿನ' ಉಲ್ಲೇಖ! ಹೈಕಮಾಂಡ್ ಕಡೆ ಬೆಟ್ಟು ತೋರಿದ ಸಿಎಂ!

ಈ ಮೂಲಕ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಅವರಿಗೆ ಈ ಬಾರಿ ಮುಖ್ಯಮಂತ್ರಿ ಪಟ್ಟ ಇಲ್ಲ. 2028ರಲ್ಲಿ ಸಿಗಬಹುದು ಎಂಬುದನ್ನು ಸೂಚ್ಯವಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com