ಬೇಸಿಗೆ ಹಿನ್ನೆಲೆ, ರಾಜ್ಯದಲ್ಲಿ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ: 31 ಗ್ರಾಮಗಳಿಗೆ ಟ್ಯಾಂಕರ್‌ ನೀರು- ಪ್ರಿಯಾಂಕ್ ಖರ್ಗೆ!

ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
Priyank Kharge
ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

183 ಗ್ರಾಮಗಳಲ್ಲಿ ನೀರಿನ ಸಮಸ್ಯೆ: ರಾಜ್ಯದಲ್ಲಿ ಈಗಾಗಲೇ 21 ಜಿಲ್ಲೆಗಳ 144 ತಾಲ್ಲೂಕುಗಳಲ್ಲಿನ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇವುಗಳ ಪೈಕಿ 31 ಗ್ರಾಮಗಳಿಗೆ 96 ಟ್ಯಾಂಕರ್‌ಗಳ ಮುಖಾಂತರ ಹಾಗೂ 152 ಗ್ರಾಮಗಳಿಗೆ 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದಿದ್ದಾರೆ.

ಮಾರ್ಚ್ 2026ರಲ್ಲಿ ಫ್ಲಷಿಂಗ್‌ ಹಾಗೂ ಆಳಗೊಳಿಸುವ ಮೂಲಕ 1053 ಕೊಳವೆ ಬಾವಿಗಳನ್ನು ದುರಸ್ತಿಗೊಳಿಸುವುದು ಹಾಗೂ ತುರ್ತು ಸಂದರ್ಭಗಳಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯುವುದು ಅವಶ್ಯಕವೆಂದು ನಿರೀಕ್ಷಿಸಲಾಗಿದ್ದು, ಆದ್ಯತೆಯ ಮೇರೆಗೆ ಕ್ರಮವಹಿಸಲು ಎಲ್ಲಾ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

2026ನೇ ಸಾಲಿನ ಬೇಸಿಗೆಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಹಣವನ್ನು ಕೇಂದ್ರ ಹಾಗೂ ರಾಜ್ಯಗಳ ಬರ ಪರಿಹಾರ ನಿಧಿ ಹಾಗೂ ಇಲಾಖೆಯ ಟಾಸ್ಕ್‌ಫೋರ್ಸ್‌ ಅಡಿ ಸಂಯೋಜಿತಗೊಳಿಸಿ ಬಳಸಿಕೊಂಡು ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Priyank Kharge
DPR ಬಂದರೆ ಕಲಬುರಗಿಯಲ್ಲಿ Millet Hub ಸ್ಥಾಪನೆಗೆ ಸರ್ವ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯತಿಗಳು, ತಾಲ್ಲೂಕು ಪಂಚಾಯತಿಗಳು ಹಾಗೂ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com