Priyank kharge
ಪ್ರಿಯಾಂಕ್ ಖರ್ಗೆ

ಮುಂದಿನ ಒಂದೂವರೆ ವರ್ಷಗಳಲ್ಲಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಯೋಜನೆಗೆ ಅನುದಾನ ನೀಡುತ್ತಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ರಾಜ್ಯ ಸರ್ಕಾರ ಆಯ್ಕೆ ಮಾಡಿದ 293 ರಸ್ತೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಿಳಂಬವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
Published on

ಬೆಂಗಳೂರು: ಪ್ರಗತಿ ಪಥ ಯೋಜನೆಯಡಿ ಮುಂದಿನ ಒಂದೂವರೆ ವರ್ಷಗಳಲ್ಲಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿಯನ್ನು ಸಂಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯೋಜನೆಗೆ ಅನುದಾನ ನೀಡುತ್ತಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ರಾಜ್ಯ ಸರ್ಕಾರ ಆಯ್ಕೆ ಮಾಡಿದ 293 ರಸ್ತೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಿಳಂಬವಾಗಿದೆ ಎಂದರು.

ಈ ಯೋಜನೆಯಡಿ ಸುಮಾರು 5,180 ಕೋಟಿ ವೆಚ್ಚದಲ್ಲಿ 7,110 ಕಿಲೋಮೀಟರ್‌ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನಿಂದ 3,242 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 1,443 ಕೋಟಿ ಹಣಕಾಸು ಒದಗಿಸಲಾಗುತ್ತಿದೆ. ಇದಲ್ಲದೇ ನಿರ್ವಹಣೆಗಾಗಿ 504 ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದರು.

ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1,356 ರಸ್ತೆಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿರುವ 293 ರಸ್ತೆಗಳಿಗೆ ಎಡಿಬಿ ಆಕ್ಷೇಪ ವ್ಯಕ್ತಪಡಿಸಿದೆ.

ಪರಿಸರ-ಸೂಕ್ಷ್ಮ ವಲಯಗಳು, ಮೀಸಲು ಅರಣ್ಯ ವ್ಯಾಪ್ತಿಯಲ್ಲಿನ ರಸ್ತೆಗಳು, ಸರಿಯಾದ ಮಾರ್ಗ ಇಲ್ಲದಿರುವ ಕಡೆ ರಸ್ತೆ ನಿರ್ಮಾಣ ಅವರ ಆಕ್ಷೇಪಗಳಾಗಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

Priyank kharge
Karnataka Assembly session: ಅಂಗನವಾಡಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇದರ ಹೊರತಾಗಿಯೂ, 999 ರಸ್ತೆಗಳಿಗೆ ವಿಸ್ತೃತ ಯೋಜನಾ ವರದಿ (DPR)ಸಿದ್ಧಪಡಿಸಲಾಗಿದ್ದು, 573 ರಸ್ತೆಗಳಿಗೆ ಟೆಂಡರ್‌ಗೆ ಸಿದ್ಧವಾಗಿವೆ. ಮುಂದಿನ 1.5 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 7,110 ಕಿ.ಮೀ ರಸ್ತೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com