ಶಾಲೆಗೆ ಕೆಲ ನಿಮಿಷ ತಡ: ಪುಟ್ಟ ಬಾಲಕನ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿದ ಆರೋಪ; ಜುವೆನೈಲ್ ಜಸ್ಟಿಸ್ ಕಾಯ್ದೆಯಡಿ ಪ್ರಕರಣ ದಾಖಲು

ಮಗುವಿಗೆ ಇಂತಹ ಕಠಿಣ ಶಿಕ್ಷೆ ನೀಡಿರುವುದು ದೈಹಿಕ ಮತ್ತು ಮಾನಸಿಕವಾಗಿ ಹಾನಿಕಾರಕವಾಗಬಹುದು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
School childrens
ಮಕ್ಕಳನ್ನು ಬಿಸಿಲಿನಲ್ಲಿ ನಿಲ್ಲಿಸಿರುವ ಶಾಲೆ.
Updated on

ಬೆಂಗಳೂರು: ಕೆಲ ನಿಮಿಷ ತಡವಾಗಿ ಬಂದಿದ್ದಕ್ಕೆ ಪುಟ್ಟ ಬಾಲಕನನ್ನು ಸುಮಾರು ಎರಡು ಗಂಟೆಗಳ ಕಾಲ ಬಿಸಿಲಿನಲ್ಲಿ ನಿಲ್ಲಿಸಿದ ಆರೋಪವೊಂದು ನಗರದ ಶಾಲೆಯೊಂದರ ವಿರುದ್ಧ ಕೇಳಿ ಬಂದಿದೆ.

ವರದಿಗಳ ಪ್ರಕಾರ, 1ನೇ ತರಗತಿಯಲ್ಲಿ ಓದುತ್ತಿರುವ ಆರು ವರ್ಷದ ಬಾಲಕನು ಶಾಲೆಗೆ ತಡವಾಗಿ ಬಂದ ಹಿನ್ನೆಲೆಯಲ್ಲಿ ಶಿಕ್ಷೆಯಾಗಿ ಬಿಸಿಲಿನಲ್ಲಿ ನಿಲ್ಲಿಸಲಾಯಿತು ಎಂದು ಪೋಷಕರು ಆರೋಪಿಸಿದ್ದಾರೆ. ಈ ಘಟನೆ ನಗರದ ಶ್ರೀ ಚೈತನ್ಯಾ ಶಾಲೆಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.

ಮಗುವಿಗೆ ಇಂತಹ ಕಠಿಣ ಶಿಕ್ಷೆ ನೀಡಿರುವುದು ದೈಹಿಕ ಮತ್ತು ಮಾನಸಿಕವಾಗಿ ಹಾನಿಕಾರಕವಾಗಬಹುದು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಇದೇ ವೇಳೆ, ಮಕ್ಕಳಿಗೆ ದೈಹಿಕ ಅಥವಾ ಮಾನಸಿಕ ನೋವುಂಟು ಮಾಡುವ ಯಾವುದೇ ಕ್ರಮವು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಘಟನೆ ಕುರಿತು 2015 ರ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಮಕ್ಕಳನ್ನು ದೈಹಿಕ ಅಥವಾ ಮಾನಸಿಕ ತೊಂದರೆಗೆ ಒಳಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ತನಿಖೆ ಅಥವಾ ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ಮಗುವಿನ ಗುರುತನ್ನು ಬಹಿರಂಗಪಡಿಸುವುದನ್ನು ನಿಷೇಧಿಸುವ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ.

ಮಗುವಿನ ಗುರುತನ್ನು ಬಹಿರಂಗಪಡಿಸುವ ವೀಡಿಯೊಗಳು ಅಥವಾ ಮಾಹಿತಿಯನ್ನು ಹಂಚಿಕೊಳ್ಳದಂತೆ ನಾವು ಸಾರ್ವಜನಿಕರನ್ನು ವಿನಂತಿಸುತ್ತೇವೆ. ಅಂತಹ ಘಟನೆಗಳನ್ನು ನೇರವಾಗಿ ಪೊಲೀಸರಿಗೆ ಅಥವಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ವರದಿ ಮಾಡಬೇಕು ಎಂದು ತಿಳಿಸಿದ್ದಾರೆ.

School childrens
ಬೆಂಗಳೂರು: ಶಾಲೆಯಲ್ಲಿ 'ಸೀಟ್ ಬ್ಲಾಕಿಂಗ್': 26,000 ರೂ ವಂಚನೆ ಆರೋಪ; FIR ದಾಖಲು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com