ಮಾರ್ಚ್ 23ರಿಂದ ಏಪ್ರಿಲ್ 4 ರವರೆಗೆ ವೈರಮುಡಿ ಬ್ರಹ್ಮೋತ್ಸವ: ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆ!

ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಎನ್. ಚಲುವರಾಯಸ್ವಾಮಿ, ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
 Vairamudi utsava
ವೈರಮುಡಿ ಬ್ರಹ್ಮೋತ್ಸವದ ಸಾಂದರ್ಭಿಕ ಚಿತ್ರ
Updated on

ಮಂಡ್ಯ: ಐತಿಹಾಸಿಕ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವ ಮಾ. 23ರಿಂದ ಏ. 4 ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾ. 28 ರಂದು ಜರುಗಲ್ಲಿದ್ದು, ವೈರಮುಡಿ ಉತ್ಸವದಲ್ಲಿ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದರು.

ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಎನ್. ಚಲುವರಾಯಸ್ವಾಮಿ, ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜೊತೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದರು.

ಪೊಲೀಸ್ ಇಲಾಖೆಯವರು ವೈರಮುಡಿ ಬ್ರಹ್ಮೋತ್ಸವದಲ್ಲಿ ಕಿರೀಟಧಾರಣಾ ಮೆರವಣಿಗೆಯ ಸಂದರ್ಭದಲ್ಲಿ ಶಾಂತಿಯುತವಾಗಿ ಹಾಗೂ ಸಮಾಧಾನವಾಗಿ ಜನರು ದೇವರು ನೋಡವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಈ ಸಂಬಂಧ ದೇವಸ್ಥಾನದ ಅರ್ಚಕರೊಂದಿಗೆ ಸಭೆ ನಡೆಸಿ ಶಾಂತಿಯುತವಾಗಿ ನಡೆಯಲು ಅಗತ್ಯ ಸಿದ್ಥತೆ ಮಾಡಿಕೊಳ್ಳಿ ಎಂದು ಸಚಿವರು ತಿಳಿಸಿದರು.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಕುಡಿಯುವ ನೀರಿನ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ವೈರಮುಡಿ ಉತ್ಸವದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು ಎಂದು ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತಾದಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

 Vairamudi utsava
ಮಕ್ಕಳಿಗೆ ಆರೋಗ್ಯಕರ ಆಹಾರ ಸೇವನೆ ಮತ್ತು ಕೃಷಿಯಲ್ಲಿ ಆಸಕ್ತಿ ಹೆಚ್ಚಿಸಿ: ಸಚಿವ ಎನ್ ಚಲುವರಾಯಸ್ವಾಮಿ

ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಆರೋಗ್ಯ ಸೇವೆಗಳು, ಸಾರಿಗೆ ವ್ಯವಸ್ಥೆ (ಕೆ.ಎಸ್.ಆರ್.ಟಿ.ಸಿ ಬಸ್‌ಗಳು) ಮತ್ತು ಬಿಗಿ ಪೊಲೀಸ್ ಬಂದೋಬಸ್ತ್‌ಗೆ ಸಭೆಯಲ್ಲಿ ಆದ್ಯತೆ ನೀಡಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ.ಜೆ. ಶೋಭಾರಾಣಿ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com