West Asia conflict: ರಾಜ್ಯದಲ್ಲಿ ಸಿಲುಕಿರುವ ವಿದೇಶಿ ಪ್ರವಾಸಿಗರಿಗೆ ರಾಜ್ಯ ಸರ್ಕಾರ ನೆರವು ಘೋಷಣೆ

ರಾಜ್ಯದಲ್ಲಿ ಸಿಲುಕಿರುವ ವಿದೇಶಿ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರ ವೀಸಾ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡಲಾಗುತ್ತದೆ.
ಸಚಿವ ಹೆಚ್.ಕೆ.ಪಾಟೀಲ್
ಸಚಿವ ಹೆಚ್.ಕೆ.ಪಾಟೀಲ್
Updated on

ಬೆಂಗಳೂರು: ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಿಲುಕಿರುವ ವಿದೇಶಿ ಪ್ರವಾಸಿಗರಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರದಿಂದ ಆರಂಭವಾಗಿರುವ ಮೂರು ದಿನಗಳ ಪ್ರಯಾಣ ಮತ್ತು ವ್ಯಾಪಾರ ಮೇಳ (ಟಿಟಿಎಫ್) ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಲುಕಿರುವ ವಿದೇಶಿ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರ ವೀಸಾ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡಲಾಗುತ್ತದೆ ಎಂದರು. ಜೊತೆಗೆ ಇರಾನ್ ಸೇರಿದಂತೆ ಇತರ ದೇಶಗಳಲ್ಲಿ ಇರುವ ಅವರ ಕುಟುಂಬ ಸದಸ್ಯರೊಂದಿಗೆ ಸಂಪರ್ಕ ಸಾಧಿಸಲು ಕೂಡ ಸರ್ಕಾರ ನೆರವಾಗಲಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಂಕಷ್ಟಕ್ಕೆ ಸಿಲುಕಿರುವ ಪ್ರವಾಸಿಗರಿಗೆ ಅಗತ್ಯ ಸಹಾಯ ಒದಗಿಸಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇತರ ರಾಜ್ಯಗಳಿಗಿಂತ ಕರ್ನಾಟಕದ ಪ್ರವಾಸೋದ್ಯಮ ಇನ್ನೂ ಸಮರ್ಪಕವಾಗಿ ಅನ್ವೇಷಿಸಲ್ಪಟ್ಟಿಲ್ಲ ಮತ್ತು ಪ್ರಚಾರವೂ ಆಗಿಲ್ಲ. ರಾಜ್ಯದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸಲು ವಿವಿಧ ಭಾಗಗಳಲ್ಲಿ ತೆರೆದ ವಸ್ತು ಸಂಗ್ರಹಾಲಯಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದರ ಪ್ರಯತ್ನದಂತೆ ಮೊದಲ ವಸ್ತುಸಂಗ್ರಹಾಲಯವನ್ನು ಲಕ್ಕುಂಡಿಯಲ್ಲಿ ನಿರ್ಮಿಸಲಾಗುವುದು, ಅಲ್ಲಿ ಉತ್ಖನನಗಳು ನಡೆಯುತ್ತಿವೆ. ಈಗಾಗಲೇ ಸುಮಾರು 3,500 ಪುರಾತತ್ವ ವಸ್ತುಗಳನ್ನು ಅಧ್ಯಯನ ಮಾಡಲಾಗಿದ್ದು, ಇನ್ನೂ 1,500 ವಸ್ತುಗಳು ಪತ್ತೆಯಾಗಿವೆ. ಇವುಗಳನ್ನು ಹೊಸ ವಸ್ತುಸಂಗ್ರಹಾಲಯದಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತದೆ ಎಂದು ಹೇಳಿದರು.

ಸಚಿವ ಹೆಚ್.ಕೆ.ಪಾಟೀಲ್
ಮಧ್ಯಪ್ರಾಚ್ಯ ಉದ್ವಿಗ್ನತೆ ಮತ್ತಷ್ಟು ತೀವ್ರ: ಇರಾನ್ ನೂತನ ಪರಮೋಚ್ಛ ನಾಯಕ ಗಾಯಗೊಂಡಿರುವುದು ನಿಜ ಆದರೆ, ಬದುಕಿದ್ದಾನೆ; ಡೊನಾಲ್ಡ್ ಟ್ರಂಪ್

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಕೆ.ವಿ. ತ್ರಿಲೋಕ್ ಚಂದ್ರ ಮಾತನಾಡಿ, ಪಶ್ಚಿಮ ಏಷ್ಯಾ ಸಂಘರ್ಷದ ಪರಿಣಾಮ ಈ ಅವಧಿಯಲ್ಲಿ ವಿದೇಶ ಪ್ರವಾಸ ಕಡಿಮೆಯಾಗಿರುವುದರಿಂದ ರಾಜ್ಯಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದರು.

ಕರ್ನಾಟಕದಲ್ಲಿ ವರ್ಷಕ್ಕೆ ಸುಮಾರು 30 ಕೋಟಿ ದೇಶೀಯ ಪ್ರವಾಸಿಗರು ಭೇಟಿ ನೀಡುತ್ತಿದ್ದು, ದೇಶೀಯ ಪ್ರವಾಸೋದ್ಯಮದಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಖಾಸಗಿ ವಲಯದೊಂದಿಗೆ ಹೆಚ್ಚಿನ ಸಹಭಾಗಿತ್ವ ಹೆಚ್ಚಿಸಲಾಗುತ್ತದೆ. ಹಂಪಿಯಲ್ಲಿ ರಾತ್ರಿ ವೇಳೆಯ ಪ್ರವಾಸ ಸೇರಿದಂತೆ ಹಲವು ಹೊಸ ಸೇವೆಗಳನ್ನು ಪ್ರವಾಸಿಗರಿಗೆ ನೀಡುವ ಯೋಜನೆಯಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com