ಮಂಡ್ಯ: ವಿಸಿ ಫಾರಂನಲ್ಲಿ 14 ಕೋಟಿ ರೂ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರ ಸಚಿವ ಭೂಮಿಪೂಜೆ!

ಖೇಲೋ ಇಂಡಿಯಾ! ವೈಬ್ರೆಂಟ್ ಮಂಡ್ಯ' ನಿನಾದಕ್ಕೆ ಪೂರಕವಾಗಿ ಮಂಡ್ಯ ಜಿಲ್ಲೆಯಲ್ಲಿ ಕ್ರೀಡೆಯು ಉಜ್ವಲವಾಗಿ ಬೆಳೆದು ಹೆಚ್ಚು ಪ್ರಮಾಣದಲ್ಲಿ ಚಾಂಪಿಯನ್ ಗಳು ಹೊರಬರಲಿ ಎಂದು ಸಚಿವರಿಬ್ಬರು ಕರೆ ನೀಡಿದರು.
mansukhmandviya and HD Kumaraswamy
ಕೇಂದ್ರ ಸಚಿವರಾದ ಮನ್ಸುಖ್ ಮಾಂಡವೀಯ, ಎಚ್ ಡಿ ಕುಮಾರಸ್ವಾಮಿ
Updated on

ಮಂಡ್ಯ: ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಮಂಡ್ಯಕ್ಕೆ ಮಂಜೂರಾಗಿರುವ ₹14 ಕೋಟಿ ರೂ. ವೆಚ್ಚದ ಬಹುಪಯೋಗಿ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರದ ಯುವಜನ ಸಬಲೀಕರಣ, ಕ್ರೀಡಾ ಸಚಿವರಾದ ಮನ್ಸುಖ್ ಮಾಂಡವೀಯ ಹಾಗೂ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಶನಿವಾರ ಭೂಮಿಪೂಜೆ ನೆರವೇರಿಸಿ ಅಡಿಗಲ್ಲು ಹಾಕಿದರು.

ಮಂಡ್ಯದ ವಿಸಿ ಫಾರಂನಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಚಿವರಿಬ್ಬರು, 'ಖೇಲೋ ಇಂಡಿಯಾ! ವೈಬ್ರೆಂಟ್ ಮಂಡ್ಯ' ನಿನಾದಕ್ಕೆ ಪೂರಕವಾಗಿ ಮಂಡ್ಯ ಜಿಲ್ಲೆಯಲ್ಲಿ ಕ್ರೀಡೆಯು ಉಜ್ವಲವಾಗಿ ಬೆಳೆದು ಹೆಚ್ಚು ಪ್ರಮಾಣದಲ್ಲಿ ಚಾಂಪಿಯನ್ ಗಳು ಹೊರಬರಲಿ ಎಂದು ಕರೆ ನೀಡಿದರು.

ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕೆ.ಆರ್. ಪೇಟೆ ಶಾಸಕ ಮಂಜುನಾಥ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.

ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಮನ್ಸುಖ್ ಮಾಂಡವೀಯ, ಖೇಲೋ ಇಂಡಿಯಾ ಯೋಜನೆಯು ಭಾರತದ ತಳಮಟ್ಟದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಲು ಮತ್ತು ಭಾರತವನ್ನು ಶ್ರೇಷ್ಠ ಕ್ರೀಡಾ ರಾಷ್ಟ್ರವಾಗಿ ರೂಪಿಸಲು ಕೇಂದ್ರ ಸರಕಾರ ಜಾರಿಗೆ ತಂದ ರಾಷ್ಟ್ರೀಯ ಕಾರ್ಯಕ್ರಮವಾಗಿದೆ. ಹೆಚ್.ಡಿ. ಕುಮಾರಸ್ವಾಮಿ ಅವರ ಪರಿಶ್ರಮದಿಂದ ಮಂಡ್ಯದಲ್ಲಿ ಈ ಸುಸಜ್ಜಿತ ಕ್ರೀಡಾಂಗಣ ಬರುತ್ತಿದೆ ಎಂದು ಹೇಳಿದರು.

mansukhmandviya and HD Kumaraswamy
ಮಂಡ್ಯ: ಸಂವಿಧಾನದ ಆಶಯದಂತೆ ಮೋದಿ ಸರ್ಕಾರ ಕಾರ್ಯನಿರ್ವಹಣೆ- ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ

ಮಂಡ್ಯ ನೆಲದಿಂದ ರಾಜ್ಯವಷ್ಟೇ ಅಲ್ಲ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕ್ರೀಡಾಪಟುಗಳು ಬಂದಿದ್ದಾರೆ. ಆ ಪೈಕಿ ನಾನು ವಿಕಾಸಗೌಡ, ಕೆ.ಆರ್. ಶಿಲ್ಪಾ ಅವರನ್ನು ನೆನಪಿಸಿಕೊಳ್ಳಲು ಬಯಸುತ್ತೇನೆ. ಇಂತಹ ಅನೇಕ ಕ್ರೀಡಾಪಟುಗಳು ಮಂಡ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಮುಖ್ಯವಾಗಿ ವೀಲ್ ಚೇರ್ ಟೆನಿಸ್ ಆಟಗಾರ್ತಿ, ಭಾರತ ನಂಬರ್ ಒನ್ ವೀಲ್ ಚೇರ್ ಟೆನಿಸ್ ಆಟಗಾರ್ತಿ ಆಗಿರುವ ಶಿಲ್ಪಾ ಅವರು ಭಾರತದ ಕೀರ್ತಿಯನ್ನು ದೇಶ ವಿದೇಶಗಳಲ್ಲಿ ಬೆಳಗುತ್ತಿದ್ದಾರೆ. ಇಂತಹ ಅಸಂಖ್ಯಾತ ಪ್ರತಿಭೆಗಳು ಇಲ್ಲಿಂದ ಬರಬೇಕು ಎಂದು ಹಾರೈಸುತ್ತೇನೆ ಎಂದು ಅವರು ಹೇಳಿದರು.

ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಕಳೆದ ಹನ್ನೊಂದು ವರ್ಷಗಳಲ್ಲಿ ಕ್ರೀಡಾ ಪೂರಕ ವ್ಯವಸ್ಥೆ ಹೆಚ್ಚಿಸಲು ಗುರುತರವಾಗಿ ಕೆಲಸ ಮಾಡಿದೆ. ಕಳೆದ ಬಜೆಟ್ ನಲ್ಲಿ ಕ್ರೀಡಾ ಮೂಲಸೌಕರ್ಯ ವೃದ್ಧಿಗೆ ₹4,000 ಕೋಟಿ ರೂ. ಹಂಚಿಕೆ ಮಾಡಿದೆ. ಹತ್ತು ವರ್ಷಗಳ ಹಿಂದೆ ಈ ಉದ್ದೇಶಕ್ಕೆ ಕೇವಲ ₹1200 ಕೋಟಿ ರೂ. ಮಾತ್ರ ಕೊಡಲಾಗುತ್ತಿತ್ತು. ಅದರ ಪ್ರಮಾಣ ಈಗ ಮೂರೂವರೆ ಪಟ್ಟು ಹೆಚ್ಚಾಗಿದೆ ಎಂಬುದನ್ನು ಎಲ್ಲರೂ ಗಮನಿಸಬೇಕು ಎಂದು ಅವರು ಹೇಳಿದರು.

ವಿಶೇಷ ಚೇತನರಿಗೆ ಎಲೆಕ್ಟ್ರಿಕ್ ವಾಹನಗಳ ವಿತರಣೆ: ಇದೇ ವೇಳೆ 388 ಮಂದಿ ವಿಶೇಷ ಚೇತನರಿಗೆ ಟಿಸಿಎಸ್ ಕಂಪನಿ ಮತ್ತು ಭಾರತೀಯ ಉಕ್ಕು ಪ್ರಾಧಿಕಾರ (SAIL) ತಮ್ಮ ಸಿಎಸ್ ಆರ್ ನಿಧಿಯಲ್ಲಿ ನೀಡಿರುವ tvsqub9 ಎಲೆಕ್ಟ್ರಿಕ್ ವಾಹನವನ್ನು ವಿತರಣೆ ಮಾಡಲಾಯಿತು. ತದನಂತರ ಇನ್ಫೋಸಿಸ್ ಕಂಪನಿ ನೀಡಿರುವ 500 ಕಂಪ್ಯೂಟರ್ ಗಳು, 100 ಲ್ಯಾಪ್ ಟಾಪ್ ಗಳನ್ನು ಸರ್ಕಾರಿ ಶಾಲೆಗಳಿಗೆ ಹಸ್ತಾಂತರ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com