ಕರ್ನಾಟಕದಲ್ಲಿ ಎಲ್ ಪಿಜಿ ಸಿಲಿಂಡರ್ ಸಮಸ್ಯೆ ನೀಗಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಜನಸಂಖ್ಯೆಯ ದೊಡ್ಡ ಭಾಗವು ಆಹಾರಕ್ಕಾಗಿ ಹೊಟೇಲ್ ಮೇಲೆ ಅವಲಂಬಿತವಾಗಿದ್ದು, ಎಲ್‌ಪಿಜಿ ಕೊರತೆಯಿಂದ ಹೊಟೇಲ್ ಸೇವೆಗಳು ಅಸ್ತವ್ಯಸ್ತವಾದರೆ ಸಾಮಾನ್ಯ ಜೀವನದ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದರು.
A cook at a hotel in Karnataka Chitrakala Parishath prepares food with firewood on Sunday after LPG cylinder supply petered out across the city on Sunday.
ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಕಡಿಮೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಚಿತ್ರಕಲಾ ಪರಿಷತ್ತಿನಲ್ಲಿರುವ ಹೊಟೇಲ್ ನ ಅಡುಗೆಗಾರರು ಕಟ್ಟಿಗೆಯ ಬೆಂಕಿಯಲ್ಲಿ ಆಹಾರ ತಯಾರಿಸುತ್ತಿರುವ ದೃಶ್ಯ.
Updated on

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆಯನ್ನು ಎದುರಿಸಲು ವಿದೇಶಗಳಿಂದ ಅನಿಲವನ್ನು ಆಮದು ಮಾಡುವುದೂ ಸೇರಿದಂತೆ ಪರ್ಯಾಯ ಕ್ರಮಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರವನ್ನು ವಿನಂತಿಸಿ ಪತ್ರ ಬರೆದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಬಗ್ಗೆ ಸರ್ಕಾರ ಈಗಾಗಲೇ ಪ್ರತಿಕ್ರಿಯೆ ನೀಡಿದೆ ಎಂದು ಅವರು ಹೇಳಿದರು. ಜನಸಂಖ್ಯೆಯ ದೊಡ್ಡ ಭಾಗವು ಆಹಾರಕ್ಕಾಗಿ ಹೊಟೇಲ್ ಮೇಲೆ ಅವಲಂಬಿತವಾಗಿದ್ದು, ಎಲ್‌ಪಿಜಿ ಕೊರತೆಯಿಂದ ಹೊಟೇಲ್ ಸೇವೆಗಳು ಅಸ್ತವ್ಯಸ್ತವಾದರೆ ಸಾಮಾನ್ಯ ಜೀವನದ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು. ಕರ್ನಾಟಕದ ವಿರುದ್ಧ ಕೇಂದ್ರ ಸರ್ಕಾರ ಮಲತಾಯಿ ಧೋರಣೆಯಿಂದ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಎಲ್‌ಪಿಜಿ ಪೂರೈಕೆ ಸಮಸ್ಯೆ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದೆ ಎಂದು ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ನಾಯಕರು ಹೇಳಿಕೆ ನೀಡುವ ಬದಲು ರಾಜ್ಯಕ್ಕೆ ಹೆಚ್ಚಿನ ಎಲ್‌ಪಿಜಿ ಪೂರೈಕೆ ಆಗುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವಂತೆ ಅವರು ಸಲಹೆ ನೀಡಿದರು.

A cook at a hotel in Karnataka Chitrakala Parishath prepares food with firewood on Sunday after LPG cylinder supply petered out across the city on Sunday.
LPG ಕೊರತೆ ನಡುವೆ ಜೈವಿಕ ಅನಿಲದತ್ತ ಮುಖ ಮಾಡಿದ ರೈತರು: ಹಸುವಿನ ಸಗಣಿಯಿಂದ ತಯಾರಿಸಿದ ಪರ್ಯಾಯ ಇಂಧನ ಬಳಕೆ ಸಕ್ಸಸ್..!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com