ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಹುಲಿ ಸಾವು

ಸುಮಾರು ಒಂದೂವರೆ ವರ್ಷದ ಹುಲಿ, ಸ್ಥಳೀಯ ರೈತ ತನ್ನ ಬೆಳೆಗಳನ್ನು ರಕ್ಷಿಸಲು ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಸಾವನ್ನಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Tigress electrocuted in Chamarajanagar district
ವಿದ್ಯುತ್ ತಂತಿ ತಗುಲಿ ಹುಲಿ ಸಾವು
Updated on

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹಳ್ಳಿಯೊಂದರ ಕೃಷಿ ಭೂಮಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಹುಲಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬಂಡೀಪುರ ಹುಲಿ ಅಭಯಾರಣ್ಯದ ಬಳಿಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಸುಮಾರು ಒಂದೂವರೆ ವರ್ಷದ ಹುಲಿ, ಸ್ಥಳೀಯ ರೈತ ತನ್ನ ಬೆಳೆಗಳನ್ನು ರಕ್ಷಿಸಲು ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಸಾವನ್ನಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tigress electrocuted in Chamarajanagar district
ನಾಗರಹೊಳೆ ಅಭಯಾರಣ್ಯದಲ್ಲಿ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು!

ವಿದ್ಯುತ್ ಆಘಾತಕ್ಕೆ ಕಾರಣವಾದ ನಿಖರವಾದ ಸಂದರ್ಭಗಳ ಕುರಿತು ತನಿಖೆ ಮಾಡಲಾಗುತ್ತಿದೆ.

"ಕೃಷಿ ಭೂಮಿಯಲ್ಲಿ ವಿದ್ಯುತ್ ಬೇಲಿ ಅಳವಡಿಸುವುದು ಕಾನೂನುಬಾಹಿರ. ಇದು ಪ್ರಾಣಿಗಳ ಸಾವಿಗೆ ಕಾರಣವಾಗುತ್ತದೆ. ಸಣ್ಣ ಶಾಕ್ ನೀಡುವ ಸೌರ ಬೇಲಿಯನ್ನು ಮಾತ್ರ ಅನುಮತಿಸಲಾಗುತ್ತದೆ" ಎಂದು ಅವರು ಹೇಳಿದ್ದಾರೆ.

ಹುಲಿಯ ಮರಣೋತ್ತರ ಪರೀಕ್ಷೆಯು ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಜಮೀನಿನ ಮಾಲೀಕರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com