

ಬೆಂಗಳೂರು: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ಇಂದು ಮಾರ್ಚ್ 18ಕ್ಕೆ ಆರಂಭವಾಗಿ ಏಪ್ರಿಲ್ 2ರ ವರೆಗೆ ನಡೆಯಲಿದೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯುತ್ತಿದ್ದಾರೆ.
ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಯಾಣ ಸುಗಮವಾಗಲು ಕೆಎಸ್ಆರ್ಟಿಸಿ ಉಚಿತ ಪ್ರಯಾಣ ಘೋಷಿಸಿದ್ದು, ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಬಹುದು. ಗ್ರಾಮೀಣ ಭಾಗದ ಮಕ್ಕಳಿಗೆ ವಿಶೇಷವಾಗಿ ಸಂಚಾರಕ್ಕೆ ಸುಗಮವಾಗಲು ಸರ್ಕಾರ ಕ್ರಮ ಕೈಗೊಂಡಿದೆ.
ಇಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಬಸ್ಸಿನ ನಿರ್ವಾಹಕರೊಬ್ಬರು ಚಾಲಕರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಎಲ್ಲೇ ಕೈ ಮಾಡಿದರೂ ಬಸ್ ನಿಲ್ಲಿಸಿ ಎಂದು ಹೇಳುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುತ್ತಿರುವ ನಮ್ಮ ಮಕ್ಕಳ ಬಗ್ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರೊಬ್ಬರು ತೋರಿದ ಕಾಳಜಿ ಫುಲ್ ವೈರಲ್ ಆಗಿದೆ.
Advertisement