ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ: ಒಂಬತ್ತು ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಣೆ

24 ರಿಂದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Casual Images
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆಯ ನಡುವೆ ಕೆಲವೆಡೆ ಮಳೆ ಅಬ್ಬರಿಸುತ್ತಿದ್ದು, ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮಾಹಿತಿ ನೀಡಿದೆ.

ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಒಂಬತ್ತು ಜಿಲ್ಲೆಗಳಿಗೆ ಶನಿವಾರ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

24 ರಿಂದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Casual Images
ಆಲಿಕಲ್ಲು ಮಳೆ ಅಬ್ಬರ: ಕಾಶ್ಮೀರದಂತಾದ ಧಾರವಾಡದ ಕಲಘಟಗಿ..! Video

ಬೆಂಗಳೂರಿನಲ್ಲಿ ಶನಿವಾರ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com