ದಾವಣಗೆರೆ ದಕ್ಷಿಣ: ಸಮರ್ಥ್ ಆಸ್ತಿ ವಿವರ ಘೋಷಣೆ; ಕೋಟಿಗಳ ಒಡೆಯ ಶಾಮನೂರು ಮೊಮ್ಮಗ!

ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸದ್ಯ ಅವರ ಆಸ್ತಿ ವಿವರವನ್ನು ಚುನಾವಣಾ ಆಯೋಗ ಬಹಿರಂಗಪಡಿಸಿದೆ.
Samarth and Shamanuru Shivashankarappa
ಸಮರ್ಥ್ ಮತ್ತು ಶಾಮನೂರು ಶಿವಶಂಕರಪ್ಪ
Updated on

ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಯ್ಕೆ ಕಗ್ಗಂಟು ತೀವ್ರಗೊಂಡಿದೆ. ಟಿಕೆಟ್‌ಗಾಗಿ ಶಾಮನೂರು ಕುಟುಂಬ ಮತ್ತು ಮುಸ್ಲಿಂ ಮುಖಂಡರ ನಡುವೆ ತಿಕ್ಕಾಟ ಉಂಟಾಗಿದೆ.

ಹೀಗಿರುವಾಗಲೇ ಕಾಂಗ್ರೆಸ್‌ನಿಂದ ಟಿಕೆಟ್ ಆಕಾಂಕ್ಷಿಯಾಗಿರುವ ಸಮರ್ಥ್ ಶಾಮನೂರು ಬಿ ಫಾರ್ಮ್ ಸಿಗುವ ಮೊದಲೇ ಎರಡೆರಡು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸದ್ಯ ಅವರ ಆಸ್ತಿ ವಿವರವನ್ನು ಚುನಾವಣಾ ಆಯೋಗ ಬಹಿರಂಗಪಡಿಸಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಮರ್ಥ್ ಶಾಮನೂರು ಅವರು ತಮ್ಮ ನಾಮಪತ್ರದೊಂದಿಗೆ ಆಸ್ತಿ ವಿವರಗಳ ಅಫಿಡವಿಟ್ ಸಲ್ಲಿಸಿದ್ದಾರೆ.

Samarth and Shamanuru Shivashankarappa
'ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ; ಅಗತ್ಯಬಿದ್ರೆ ಸಮರ್ಥ್ ನಾಮಪತ್ರ ವಾಪಸ್'

ಲಂಡನ್‌ನ ಎಕ್ಸೆಟರ್ ವಿಶ್ವವಿದ್ಯಾಲಯದಿಂದ ಪದವೀಧರರಾಗಿರುವ ಸಮರ್ಥ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

27 ವರ್ಷದ ಯುವ ಉದ್ಯಮಿ ಸಮರ್ಥ್ ಅವರು ಒಟ್ಟು ₹4.25 ಕೋಟಿಗೂ ಅಧಿಕ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ ಹೊಂದಿರುವುದಾಗಿ ತಮ್ಮ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ.

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರರಾಗಿರುವ ಸಮರ್ಥ್, ರಾಜಕೀಯಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಅಫಿಡವಿಟ್‌ನಲ್ಲಿ ನೀಡಿರುವ ಮಾಹಿತಿಯಂತೆ, ಇವರ ಬಳಿ ₹2.17 ಕೋಟಿ ಮೌಲ್ಯದ ಚರ ಆಸ್ತಿ ಹಾಗೂ ₹2.08 ಕೋಟಿ ಮೌಲ್ಯದ ಕೃಷಿ ಭೂಮಿ ಸೇರಿದಂತೆ ಸ್ಥಿರ ಆಸ್ತಿಯಿದೆ. ಸಾಲ 3,52,79,114 ರೂ ಸಾಲ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com