

ಬೆಂಗಳೂರು: ಪಶ್ಚಿಮ ಏಷ್ಯಾದ ಯುದ್ಧದ ಪರಿಣಾಮವಾಗಿ ಎಲ್‌ಪಿಜಿ ಕೊರತೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣಗಳು ಆತಂಕ ಹುಟ್ಟಿಸಿದೆ.
ಮಡಿವಾಳದ ಆರ್‌ಸಿ ಲೇಔಟ್‌ನ ಸಾಯಿ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಇಬ್ಬರು ದುಷ್ಕರ್ಮಿಗಳು ಎರಡು ಗ್ಯಾಸ್ ಸಿಲಿಂಡರ್‌ಗಳನ್ನು ಕದ್ದೊಯ್ದ ಘಟನೆ ಬೆಳಕಿಗೆ ಬಂದಿದೆ.
ಗುರುವಾರ ಮಧ್ಯಾಹ್ನ ಸುಮಾರು 2.45ರ ಸುಮಾರಿಗೆ ಜಾಕೆಟ್ ಮತ್ತು ಹೆಲ್ಮೆಟ್ ಧರಿಸಿ ಸ್ಕೂಟರ್ ನಲ್ಲಿ ಬಂದಿರುವ ಇಬ್ಬರು ದುಷ್ಕರ್ಮಿಗಳು ಅಪಾರ್ಟ್‌ಮೆಂಟ್‌ನ ನೆಲಮಹಡಿಯಿಂದ ಸಿಲಿಂಡರ್‌ಗಳನ್ನು ಕದ್ದಿದ್ದಾರೆ.
ಸಿಸಿಟಿವಿ ಕ್ಯಾಮೆರಾಗಳಲ್ಲಿ ದೃಶ್ಯಾ ಸೆರೆಯಾಗಿದ್ದು, ಕೇವಲ ಐದು ನಿಮಿಷಗಳಲ್ಲಿ ಕಳವು ನಡೆಸಿ ಸ್ಥಳದಿಂದ ಕಾಲ್ಕಿತ್ತಿರುವುದು ವೀಡಿಯೋದಲ್ಲಿ ಕಂಡು ಬಂದಿದೆ.
ಈ ನಡುವೆ ಫ್ಲಾಟ್‌ವೊಂದಕ್ಕೆ ಗ್ಯಾಸ್ ಸರಬರಾಜು ಏಕಾಏಕಿ ನಿಂತಿದ್ದು, ಪರಿಶೀಲಿಸಿದಾಗ ಕಳವು ಘಟನೆ ಬೆಳಕಿಗೆ ಬಂದಿದೆ. ಬಳಿಕ ಪರಿಶೀಲನೆ ನಡೆಸಿದಾಗ ಎರಡು ಸಿಲಿಂಡರ್‌ಗಳು ಕಾಣೆಯಾಗಿರುವುದು ಪತ್ತೆಯಾಗಿದೆ.
ಬೇಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ನಗರದಲ್ಲಿ ಈಗಾಗಲೇ ಎಲ್‌ಪಿಜಿ ಕೊರತೆ ತಲೆದೋರಿದ್ದು, ಈ ನಡುವೆ ಇಂತಹ ಕಳವು ಘಟನೆಗಳು ನಾಗರಿಕರಲ್ಲಿ ಆತಂಕವನ್ನು ಮತ್ತಷ್ಟು ಹೆಚ್ಚು ಮಾಡುತ್ತಿವೆ.
Advertisement