ಉಡುಪಿ: 'ಸಮಾಧಾನ ಮಹೋತ್ಸವ' ವಿರೋಧಿಸಿ ಪ್ರತಿಭಟನೆ; ಹಿಂದು ಜಾಗರಣಾ ವೇದಿಕೆಯ ಮುಖಂಡರು, ಕಾರ್ಯಕರ್ತರು ಸೇರಿ 38 ಮಂದಿ ವಶಕ್ಕೆ

ಮಾರ್ಚ್ 20ರಿಂದ 22ರವರೆಗೆ ಪ್ರತಿದಿನ ಸಂಜೆ 5.30ರಿಂದ 9.30ರವರೆಗೆ ಈ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತಿತ್ತು, ಈ ಕಾರ್ಯಕ್ರಮಕ್ಕೆ ನ್ಯಾಯಾಲಯ ಅನುಮತಿ ನೀಡಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿತ್ತು.
File photo
ಸಂಗ್ರಹ ಚಿತ್ರ
Updated on

ಉಡುಪಿ: ಉಡುಪಿಯಲ್ಲಿ ಹಮ್ಮಿಕೊಳ್ಳಲಾದ ಸಮಾಧಾನ ಮಹೋತ್ಸವ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದ 38 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಫೇಲೋಶಿಫ್ ಆಫ್ ಉಡುಪಿ ಡಿಸ್ಟ್ರಿಕ್ ಚರ್ಚಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಘಟನೆ ನಡೆದಿತ್ತು.

ಮಾರ್ಚ್ 20ರಿಂದ 22ರವರೆಗೆ ಪ್ರತಿದಿನ ಸಂಜೆ 5.30ರಿಂದ 9.30ರವರೆಗೆ ಈ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತಿತ್ತು, ಈ ಕಾರ್ಯಕ್ರಮಕ್ಕೆ ನ್ಯಾಯಾಲಯ ಅನುಮತಿ ನೀಡಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿತ್ತು.

ಈ ಕಾರ್ಯಕ್ರಮಕ್ಕೆ ತಮಿಳುನಾಡಿನ ಪಾದ್ರಿ ಮೋಹನ್ ಸಿ ಲಾಜರಸ್ ಅವರನ್ನು ವಿಶೇಷ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅವರ ಭಾಗವಹಿಸುವಿಕೆಗೆ ವಿರೋಧ ವ್ಯಕ್ತಪಡಿಸಿದ ಹಿಂದೂ ಜಾಗರಣ ವೇದಿಕೆ ಸೇರಿದಂತೆ ಹಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಾದ್ರಿ ವಿರುದ್ಧ ಹಿಂದೂ ದೇವತೆಗಳಿಗೆ ಅವಮಾನ ಮಾಡಿದ ಪ್ರಕರಣಗಳಿವೆ ಎಂದು ಆರೋಪಿಸಿದರು.

File photo
ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಠಾಣಾಧಿಕಾರಿ ನಿಧನ

ಶುಕ್ರವಾರ ಸಂಜೆ ಸುಮಾರು 5 ಗಂಟೆಗೆ, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಗೋವಿಂದ ಕಲ್ಯಾಣ ಮಂಟಪದ ಬಳಿ ಸೇರಿ ಮಾಧ್ಯಮಗಳ ಮುಂದೆ ಮಾತನಾಡಿದ ಬಳಿಕ, ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದತ್ತ ಮೆರವಣಿಗೆ ನಡೆಸಲು ಯತ್ನಿಸಿದರು. ಆದರೆ ಪೊಲೀಸರು ಮಧ್ಯಪ್ರವೇಶಿಸಿ ಅವರನ್ನು ಮುಂದೆ ಸಾಗದಂತೆ ತಡೆದರು.

ಈ ವೇಳೆ ಒಟ್ಟು 38 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 189(2) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 112 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆ ಉಡುಪಿ ನಗರದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿತ್ತು, ಇದೀಗ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆಯನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com