Online ಗೇಮ್‌ಗೆ MBBS ವಿದ್ಯಾರ್ಥಿ ಬಲಿ; ಹಾಸ್ಟೆಲ್ ಬಳಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ..!

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿ ಅನಿಷ್ಕಾರ್‌ ಆನ್‌ಲೈನ್‌ ಗೇಮ್‌ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
File photo
ಸಂಗ್ರಹ ಚಿತ್ರ
Updated on

ಬೀದರ್: ಆನ್‌ಲೈನ್‌ ಗೇಮ್‌ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ ಎಂಬಿಬಿಎಸ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಬೀದರ್‌ನಲ್ಲಿ ನಡೆದಿದೆ.

ಮೃತನನ್ನು ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ (BRIMS) ಅಂತಿಮ ವರ್ಷದ ವಿದ್ಯಾರ್ಥಿ ಅನಿಷ್ಕಾರ್ ಚವಾಣ್ ಎಂದು ಗುರುತಿಸಲಾಗಿದೆ,

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿ ಅನಿಷ್ಕಾರ್‌ ಆನ್‌ಲೈನ್‌ ಗೇಮ್‌ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದಿದ್ದು, ಸ್ನೇಹಿತನಿಂದ 70,000 ರೂ.ಗಳನ್ನು ಸಾಲವಾಗಿ ಪಡೆದಿದ್ದಾನೆ. ಗೇಮಿಂಗ್ ಚಟದಲ್ಲಿ 80,000 ರೂ.ಗಳನ್ನು ಕಳೆದುಕೊಂಡಿದ್ದಾರೆ. ಇದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆನ್‌ಲೈನ್ ಗೇಮಿಂಗ್‌ಗೆ ಸಂಬಂಧಿಸಿದ ಹಲವಾರು ಸಂದೇಶಗಳು ಆತನ ಫೋನ್ ನಲ್ಲಿ ಕಂಡು ಬಂದಿದೆ.

File photo
ಶಿವಮೊಗ್ಗ: ಪೊಲೀಸ್ ಪೇದೆ ಕಿರುಕುಳ; ಪತಿ ಮೃತಪಟ್ಟ ವಾರಕ್ಕೆ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ!

ಈ ಬಗ್ಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಬಳಿಕ ನಿಜ ಕಾರಣಗಳು ತಿಳಿದುಬರಲಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿಯ ಪೋಷಕರು ಹಾಸ್ಟೆಲ್'ಗೆ ಆಗಮಿಸಿದ್ದು, ಬೆಳೆದು ಕುಟುಂಬದ ಜವಾಬ್ದಾರಿಯನ್ನು ಹೊರಬೇಕಿದ್ದ ಮಗನ ಮೃತದೇಹ ಕಂಡು ಕಣ್ಣೀರಿಟ್ಟರು.

ಕೊನೆಯ ಬಾರಿಗೆ ಮಾರ್ಚ್ 22 ರಂದು ಮಗನೊಂದಿಗೆ ಮಾತನಾಡಿದ್ದೆ. ಮಗನ ಸಾವು ಕುರಿತು ಪುತ್ರಿ ಮಾಹಿತಿ ನೀಡಿದ್ದಳು. ಆಕೆಯೂ ಬ್ರಿಮ್ಸ್ ನಲ್ಲಿ ಎಂಬಿಬಿಎಸ್ ಮಾಡುತ್ತಿದ್ದಾಳೆ. ಆನ್ ಲೈನ್ ಗೇಮ್ ಆಡದಂತೆ ಈ ಹಿಂದೆಯೂ ಆತನಿಗೆ ಸಲಹೆ ನೀಡದ್ದೆ, ವ್ಯಸನವಾಗುತ್ತದೆ ಎಂದೂ ಎಚ್ಚರಿಸಿದ್ದೆ ಎಂದು ಅನಿಷ್ಕಾರ್ ತಂದೆ ಕಣ್ಣೀರಿಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com