

ಬೆಂಗಳೂರು: ಸಮಾಜದ ಆಗು-ಹೋಗುಗಳ ಬಗ್ಗೆ ಮೊದಲಿಂದ ಧ್ವನಿ ಎತ್ತುತ್ತಾ, ಕಳೆದ ಹತ್ತು-ಹನ್ನೆರಡು ವರ್ಷಗಳಿಂದ ಬಲಪಂಥೀಯವರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಿಶೋರ್ ಸದ್ಯ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಕೆಂಡ ಕಾರಿದ್ದಾರೆ.
ಈ ಸಂಬಂಧ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಒಟ್ಟಿಗೆ, ಒಂದು ರಾಷ್ಟ್ರದಂತೆ!? ನಮ್ಮನ್ನು ದ್ವೇಷದ ವಿಷ ಕಾರಿ, ಹಿಂದೂ ಮುಸ್ಲಿಂ ಕ್ರಿಶ್ಚಿಯನ್ನರೆಂದು ಇನ್ನೆಂದೂ ಒಂದಾಗಲು ಸಾಧ್ಯವೇ ಇಲ್ಲದಂತೆ ಒಡೆದ ನಂತರ?? ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ? ಇಲ್ಲ! ನಾವು ಭಾರತದ ಜನ ತಯಾರಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಹರಿಹಾಯ್ದಿದ್ದಾರೆ.
ನಿಮ್ಮ ರಾಜಿ, ಶರಣಾಗತಿಯಿಂದಾಗಿ ನಾವು ಇನ್ನೂ ಎಷ್ಟು ಸವಾಲುಗಳನ್ನು ಎದುರಿಸಬೇಕು??? ನಿಮ್ಮ ತಪ್ಪುಗಳು, ರಹಸ್ಯಗಳನ್ನು ಮುಚ್ಚಿಡಲು ನಾವಿನ್ನೆಷ್ಟು ಬೆಲೆ ತೆರಬೇಕು???
ಸಾಮೂಹಿಕ ಕೊಲೆಗಾರರು ಮತ್ತು ಶಿಶುಕಾಮಿಗಳನ್ನು ಅಪ್ಪಿಕೊಂಡು “ನಾವು ಯುದ್ಧ ಅಪರಾಧಿಗಳ ಜೊತೆ ನಿಲ್ಲುತ್ತೇವೆ ಎಂದು ಘೋಷಿಸುವ ಮೊದಲು ನೀವು ನಮ್ಮನ್ನು ಕೇಳಿದ್ದಿರಾ ಎಂದು ಪ್ರಶ್ನಿಸಿದ್ದಾರೆ.
ರಫೇಲ್ನಿಂದ ಎಪ್ಸ್ಟೀನ್ವರೆಗೆ, ನೋಟು ರದ್ದತಿಯಿಂದ ಕೊರೊನಾ ಲಾಕ್ಡೌನ್ವರೆಗೆ, ಕೃಷಿ ಕಾನೂನುಗಳಿಂದ ಅಗ್ನಿವೀರ್ವರೆಗೆ, ಮಣಿಪುರದಿಂದ ಕಾಶ್ಮೀರ, ಲಡಾಖ್ ನವರೆಗೆ ನಿಮ್ಮ ಯಾವುದೇ ಉನ್ಮಾದ ಭರಿತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ನಮ್ಮನ್ನೋ ಅಥವಾ ವಿರೋಧ ಪಕ್ಷದ ನಮ್ಮ ಪ್ರತಿನಿಧಿಗಳನ್ನೋ ಅಥವಾ ನಮ್ಮ ತೆರಿಗೆಯಿಂದ ನಾವು ಸಂಬಳ ಕೊಟ್ಟಿಟ್ಟಿರುವ ನಿಮ್ಮ ಸ್ವಂತ ಅಧಿಕಾರಿಗಳನ್ನೋ ಕೇಳಿದ್ದಿರಾ ಎಂದು ತಪರಾಕಿ ಹಾಕಿದ್ದಾರೆ.
Advertisement