

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಗುರುವಾರ ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿಯನ್ನು ಬಂಧಿಸಲಾಗಿದೆ.
ಕೊಲೆಯಾದ ಮಹಿಳೆಯನ್ನು ಮಹಾರಾಷ್ಟ್ರ ಮೂಲದ ಶೈಲಾ(28) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಆಕೆಯ ಪತಿ ಅಕ್ಷಯ್ ಎಂದು ಗುರುತಿಸಲಾಗಿದೆ.
ಆರೋಪಿ ಅಕ್ಷಯ್ ತನ್ನ ಎರ್ಟಿಗಾ ಕಾರಿನಲ್ಲಿ ಪತ್ನಿಯನ್ನ ಕರೆದುಕೊಂಡು ಬಂದು, ಬಳೂರಗಿ ಗ್ರಾಮದ ಬಳಿ ನಿಲ್ಲಿಸಿದ್ದಾನೆ. ಬಳಿಕ ಪತ್ನಿಯನ್ನು ಕಾರಿನಿಂದ ಬಲವಂತವಾಗಿ ಕೆಳಗಿಳಿಸಿ, ನಡುರಸ್ತೆಯಲ್ಲೇ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅಷ್ಟೇ ಅಲ್ಲದೇ ಶವದ ಮೇಲೆ ಕಾರು ಹಾಯಿಸಿ ವಿಕೃತಿ ಮೆರೆದಿದ್ದಾನೆ.
ಕೊಲೆಯ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನ್ನಿಸುವಂತಿದೆ.
ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಅಕ್ಷಯ್ ನನ್ನು ಬಂಧಿಸಿದ್ದಾರೆ.
ಕೊಲೆಗೆ ಅನೈತಿಕ ಸಂಬಂಧ ಕಾರಣ?
ಅಕ್ಷಯ್, ಶೈಲಾ ಮಹಾರಾಷ್ಟ್ರ ಮೂಲದವರಾಗಿದ್ದು, ಪತ್ನಿಯ ಅನೈತಿಕ ಸಂಬಂಧಕ್ಕೆ ರೊಚ್ಚಿಗೆದ್ದು ಅಕ್ಷಯ್, ಶೈಲಾಳನ್ನ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
Advertisement