IPL 2026, RCB vs SRH ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ!

ಐಪಿಎಲ್ ಪಂದ್ಯಗಳು ಮಾರ್ಚ್ 28 ಮತ್ತು ಏಪ್ರಿಲ್ 5 ರಂದು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.
M Chinnaswamy Stadium
ಎಂ ಚಿನ್ನಸ್ವಾಮಿ ಸ್ಟೇಡಿಯಂ
Updated on

ಬೆಂಗಳೂರು: ಮಾರ್ಚ್ 28ರಂದು ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ಸಂಚಾರ ಪೊಲೀಸರು ಗುರುವಾರ ನಿರ್ಬಂಧಗಳು ಮತ್ತು ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಮಾಡಲಾದ ವಿಸ್ತೃತ ವ್ಯವಸ್ಥೆಗಳ ಕುರಿತು ಮಾರ್ಗಸೂಚಿಯನ್ನು ರಿಲೀಸ್ ಮಾಡಿದ್ದಾರೆ.

ಐಪಿಎಲ್ ಪಂದ್ಯಗಳು ಮಾರ್ಚ್ 28 ಮತ್ತು ಏಪ್ರಿಲ್ 5 ರಂದು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಸೂಚನೆ ಪ್ರಕಾರ, ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್ಬಾ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಟ್ಟಲ್ ಮಲ್ಯ ರಸ್ತೆ ಮತ್ತು ಕಬ್ಬನ್ ಪಾರ್ಕ್ ಸೇರಿದಂತೆ ಹಲವಾರು ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಸೇಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್ ಮೈದಾನ, ಸೇಂಟ್ ಜೋಸೆಫ್ಸ್ ಯುರೋಪಿಯನ್ ಸ್ಕೂಲ್ ಮೈದಾನ, ಫ್ರೀಡಂ ಪಾರ್ಕ್ ಬಹು-ಹಂತದ ಪಾರ್ಕಿಂಗ್, ಗರುಡ ಮಾಲ್, ಶಿವಾಜಿನಗರ ಬಸ್ ನಿಲ್ದಾಣ (ಮೊದಲ ಮಹಡಿ) ಮತ್ತು ಯುಬಿ ಸಿಟಿ ಪಾರ್ಕಿಂಗ್ ಸ್ಥಳಗಳಲ್ಲಿ ಮಾತ್ರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ನೀಡಲಾಗಿದೆ.

M Chinnaswamy Stadium
IPL 2026: ಮಾ. 28ಕ್ಕೆ ಆರ್ ಸಿಬಿ vs ಸನ್ ರೈಸರ್ಸ್ ಹೈದರಾಬಾದ್ ಪಂದ್ಯ, ಮೆಟ್ರೋದಲ್ಲಿ ಫ್ರೀ ರೈಡ್, ಸಂಚಾರ ಅವಧಿ ವಿಸ್ತರಣೆ!

ಕಬ್ಬನ್ ರಸ್ತೆ, ಲಿಂಕ್ ರಸ್ತೆ ಮತ್ತು ಕ್ವೀನ್ಸ್ ರಸ್ತೆಯಲ್ಲಿರುವ ಬಹು ದ್ವಾರಗಳ ಮೂಲಕ ಕ್ರೀಡಾಂಗಣಕ್ಕೆ ಪ್ರವೇಶ ಇರುತ್ತದೆ. ಆದರೆ, ನಿರ್ಗಮನ ಮತ್ತು ವಿಐಪಿ ಸಂಚಾರಕ್ಕಾಗಿ ನಿರ್ದಿಷ್ಟ ದ್ವಾರಗಳನ್ನು ಮೀಸಲಿಡಲಾಗಿದೆ. ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳು ಮತ್ತು ಆಟೋರಿಕ್ಷಾಗಳಿಗಾಗಿ ಬಿಆರ್‌ವಿ ಮೈದಾನ ಮತ್ತು ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಪಿಕಪ್ ಪಾಯಿಂಟ್‌ಗಳನ್ನು ಗೊತ್ತುಪಡಿಸಲಾಗಿದೆ. ಗೇಟ್-6 ಮತ್ತು ಗೇಟ್-3ನಲ್ಲಿ ಡ್ರಾಪ್-ಆಫ್‌ಗಳಿವೆ ಎಂದು ಅದು ಹೇಳಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗಳು ಮತ್ತು ಮೆಟ್ರೋ ಸೇವೆಗಳಂತಹ ಸಾರ್ವಜನಿಕ ಸಾರಿಗೆಯನ್ನು ಗರಿಷ್ಠವಾಗಿ ಬಳಸಿಕೊಳ್ಳುವಂತೆ ಪೊಲೀಸರು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com