ಮಂಗಳೂರು ಫ್ಲೈಓವರ್‌ನಲ್ಲಿ ರೌಡಿಶೀಟರ್ ಬರ್ಬರ ಕೊಲೆ; ಗ್ಯಾಂಗ್ ವಾರ್ ಶಂಕೆ

ಕೊಲೆಯಾದ ರೌಡಿಶೀಟರ್ ನನ್ನು ತಲಪಾಡಿ ನಿವಾಸಿ ಆರಿಫ್ ಅಲಿಯಾಸ್ ಟ್ಯಾಬ್ಲೆಟ್ ಆರಿಫ್ ಎಂದು ಗುರುತಿಸಲಾಗಿದೆಚ
Rowdy-sheeter hacked to death on Mangaluru flyover; gang rivalry suspected
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್‌ ಮೇಲೆ ಶುಕ್ರವಾರ ಬೆಳಗ್ಗೆ 46 ವರ್ಷದ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಯಾದ ರೌಡಿಶೀಟರ್ ನನ್ನು ತಲಪಾಡಿ ನಿವಾಸಿ ಆರಿಫ್ ಅಲಿಯಾಸ್ ಟ್ಯಾಬ್ಲೆಟ್ ಆರಿಫ್ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಉಳ್ಳಾಲದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೈಕಿನಲ್ಲಿ ತೆರಳುತ್ತಿದ್ದ ಆರಿಫ್ ನನ್ನು ಬೈಕ್‌ನಿಂದ ಕೆಡವಿ, ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ, ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Rowdy-sheeter hacked to death on Mangaluru flyover; gang rivalry suspected
ಮಂಗಳೂರು: ಅಕ್ರಮ ಬಾಂಗ್ಲಾದೇಶಿ ವಲಸಿಗನೆಂದು ಶಂಕಿಸಿ ವ್ಯಕ್ತಿ ಮೇಲೆ ಹಲ್ಲೆ; ಪ್ರಕರಣ ದಾಖಲು

ಆರಿಫ್ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಆತನ ವಿರುದ್ಧ ಕೊಲೆ ಮತ್ತು ಕೊಲೆಯತ್ನ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಗೆ ಹಳೆ ವೈಷಮ್ಯ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com