ಉಡುಪಿ: ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಐವರ ಬಂಧನ

ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆಯಲ್ಲಿರುವ ಹೊಂಡಾ ಶೋರೂಮ್ ಸಮೀಪ ನಡೆದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಸನ್ನ ಎಂ.ಎಸ್ ಮತ್ತು ಅವರ ತಂಡ ಬಂಗ್ಲೆಗುಡ್ಡೆ ಸರ್ಕಲ್‌ನಿಂದ ಬರುತ್ತಿದ್ದ ಕಪ್ಪು ಕಾರನ್ನು ನಿಲ್ಲಿಸಲು ಸೂಚಿಸಿದರು.
Representational image
ಸಾಂದರ್ಭಿಕ ಚಿತ್ರ
Updated on

ಉಡುಪಿ: ಕಾರ್ಕಳ ಮತ್ತು ಶಿರ್ವದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಲು ಯತ್ನಿಸಿದ ಪ್ರಕರಣ ಹಾಗೂ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಸಂಬಂಧಿಸಿದಂತೆ ಐದು ಮಂದಿಯನ್ನು ಬಂಧಿಸಲಾಗಿದೆ.

ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆಯಲ್ಲಿರುವ ಹೊಂಡಾ ಶೋರೂಮ್ ಸಮೀಪ ನಡೆದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಸನ್ನ ಎಂ.ಎಸ್ ಮತ್ತು ಅವರ ತಂಡ ಬಂಗ್ಲೆಗುಡ್ಡೆ ಸರ್ಕಲ್‌ನಿಂದ ಬರುತ್ತಿದ್ದ ಕಪ್ಪು ಕಾರನ್ನು ನಿಲ್ಲಿಸಲು ಸೂಚಿಸಿದರು. ಆದರೆ, ವಾಹನದಲ್ಲಿದ್ದವರು ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿ ತಮ್ಮ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದರೆಂದು ಪೊಲೀಸರು ಹೇಳುತ್ತಾರೆ. ಈ ಕುರಿತು ಕಾರ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತೊಂದು ಘಟನೆದಲ್ಲಿ, ಶಿರ್ವ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಮರಬಾಡ ಅವರು ಬೆಲ್ಮಣ್ ನಿಂದ ಸಂಶಯಾಸ್ಪದವಾಗಿ ಬರುತ್ತಿದ್ದ ಅದೇ ವಾಹನವನ್ನು ಶಿರ್ವ ಗ್ರಾಮದ ಪದವು ಬಳಿ ತಡೆದರು. ಚಾಲಕನು ಮೊದಲು ವೇಗ ಕಡಿಮೆ ಮಾಡಿದರೂ, ಬಳಿಕ ಅಧಿಕಾರಿ ಮೇಲೆ ಹತ್ತಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆಂದು ತಿಳಿದುಬಂದಿದೆ. ನಂತರ ಶಿರ್ವ ಪಟ್ಟಣದಲ್ಲಿ ಪೊಲೀಸರು ವಾಹನವನ್ನು ನಿಲ್ಲಿಸಿದರು.

Representational image
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಕಲ್ಲಿನಿಂದ ಜಜ್ಜಿ 4 ವರ್ಷದ ಬಾಲಕಿ ಬರ್ಬರ ಹತ್ಯೆ; ಅತ್ಯಾಚಾರ ಶಂಕೆ..!

ತನಿಖೆಯ ವೇಳೆ ಆರೋಪಿಗಳು ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಅವರು ಜನರನ್ನು ಹಣ ಹೂಡಿಕೆ ಮಾಡಲು ಪ್ರೇರೇಪಿಸಿ ಮೋಸ ಮಾಡುತ್ತಿದ್ದು, ಅಕ್ರಮ ಜೂಜಾಟದಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತರನ್ನು ನಡೂರು ನಿವಾಸಿ ಸುಧರ್ಷಣ ಶೆಟ್ಟಿ (29), ಹೆರುರು ನಿವಾಸಿ ಕೃತವ್ಯ ಶೆಟ್ಟಿ (27), ಮೂಡೂರು ನಿವಾಸಿ ಅರುಣ್ ಶೆಟ್ಟಿ (29), ಹೆಬ್ರಿಯ ಬೆಳಂಜೆ ನಿವಾಸಿ ತೇಜಸ್ (28), ಮತ್ತು ಬೈಂದೂರು ತಾಲೂಕಿನ ಶಿರೂರು ನಿವಾಸಿ ಪ್ರಜ್ವಲ್ ಶೆಟ್ಟಿ (29) ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com