ಉಪ ಚುನಾವಣೆ: Exit pollsಗೆ ಚುನಾವಣಾ ಆಯೋಗ ನಿಷೇಧ. ಏ.9-29ರವರೆಗೆ ಫಲಿತಾಂಶ ಪ್ರಕಟಿಸದಂತೆ ಖಡಕ್ ಸೂಚನೆ

ಏಪ್ರಿಲ್ 9ರ ಬೆಳಿಗ್ಗೆ 7:00 ಗಂಟೆಯಿಂದ ಏಪ್ರಿಲ್ 29ರ ಸಂಜೆ 6:30 ರವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.
file photo
ಸಂಗ್ರಹ ಚಿತ್ರ
Updated on

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಮತದಾನದ ಪ್ರಕ್ರಿಯೆ ಮುಗಿಯುವವರೆಗೆ ಎಕ್ಸಿಟ್ ಪೋಲ್ (ಚುನಾವಣೋತ್ತರ ಸಮೀಕ್ಷೆ) ನಡೆಸುವುದನ್ನು ಅಥವಾ ಅದರ ಫಲಿತಾಂಶಗಳ ಪ್ರಕಟಿಸುವುದನ್ನು ಭಾರತೀಯ ಚುನಾವಣಾ ಆಯೋಗವು ಕಟ್ಟುನಿಟ್ಟಾಗಿ ನಿಷೇಧಿಸಿದೆ.

ಏಪ್ರಿಲ್ 9ರ ಬೆಳಿಗ್ಗೆ 7:00 ಗಂಟೆಯಿಂದ ಏಪ್ರಿಲ್ 29ರ ಸಂಜೆ 6:30 ರವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ರ್ನಾಟಕ ಮುಖ್ಯ ಚುನಾವಣಾಧಿಕಾರಿ (CEO) ಈ ಆದೇಶವನ್ನು ಮಾರ್ಚ್ 27ರಂದು ಹೊರಡಿಸಿದ್ದು, ಶನಿವಾರ ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ. ಈ ಸಂಬಂಧದ ಅಧಿಸೂಚನೆ ರಾಜ್ಯ ಗಜೆಟ್‌ನಲ್ಲಿ ಪ್ರಕಟಗೊಂಡಿದೆ.

ಚುನಾವಣಾ ಆಯೋಗದ ಸೂಚನೆಯ ಪ್ರಕಾರ, ದೇಶದ ಆರು ರಾಜ್ಯಗಳ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳಿಗೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆಗಳಿಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

file photo
ಉಪ ಚುನಾವಣೆ ಹಿನ್ನೆಲೆ: ಒಂದು ದಿನ ಮುಂಚಿತವಾಗಿ ಮಾರ್ಚ್ 26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಜನಪ್ರತಿನಿಧಿಗಳ ಕಾಯ್ದೆ 1951ರ ಸೆಕ್ಷನ್ 126A ಪ್ರಕಾರ, ಚುನಾವಣಾ ಅವಧಿಯಲ್ಲಿ ಯಾವುದೇ ವ್ಯಕ್ತಿ ಚುನಾವಣೋತ್ತರ ಸಮೀಕ್ಷೆ ನಡೆಸುವುದು ಅಥವಾ ಅದರ ಫಲಿತಾಂಶವನ್ನು ಮುದ್ರಣ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮ ಅಥವಾ ಇತರೆ ಯಾವುದೇ ರೂಪದಲ್ಲಿ ಪ್ರಕಟಿಸುವುದು ಕಾನೂನುಬಾಹಿರವಾಗಿದೆ.

ಈ ಆದೇಶದಂತೆ, ಏಪ್ರಿಲ್ 9 ಬೆಳಿಗ್ಗೆ 7 ಗಂಟೆಯಿಂದ ಏಪ್ರಿಲ್ 29 ಸಂಜೆ 6.30ರವರೆಗೆ ಯಾವುದೇ ರೀತಿಯ ಚುನಾವಣೋತ್ತರ ಸಮೀಕ್ಷೆಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com