

ನೆಲ ಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ- ಕುಣಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಸರಣಿ ಅಪಘಾತ ಸಂಭವಿಸಿದೆ.
ಹಾಸನದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ KSRTC ಪುಷ್ಪಕ್ ಪ್ಲಸ್ ಇವಿ ಬಸ್ ಓವರ್ ಟೇಕ್ ಮಾಡಲು ಹೋಗಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದು ಕಾರಿನ ಹಿಂಭಾಗ ನಜ್ಜುಗುಜ್ಜಾಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಈ ವೇಳೆ ಚಾಲಕ ಮತ್ತು ಉಳಿದ ವಾಹನಗಳ ಚಾಲಕರು, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದಿದ್ದು, ಬಸ್ ಚಾಲಕನಿಗೆ ಥಳಿಸಿದ್ದಾರೆ.
ಸಾಮಾನ್ಯವಾಗಿ ಭಾನುವಾರ ಊರಿನಿಂದ ಬೆಂಗಳೂರಿಗೆ ಬರುವ ವಾಹನಗಳ ಸಂಖ್ಯೆ ಈ ಹೆದ್ದಾರಿಯಲ್ಲಿ ಜಾಸ್ತಿ ಇರುತ್ತದೆ. ಹೀಗಾಗಿ ಇಂತಹ ಘಟನೆಗಳು ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಇಂದು ಕೂಡಾ ಸರಣಿ ಅಪಘಾತ ನಡೆದಿದೆ.
ಚಾಲಕ ಮತ್ತು ಸವಾರರ ಮಧ್ಯೆ ಜಗಳ ನಡೆದ ಪರಿಣಾಮ ಹೆದ್ದಾರಿಯಲ್ಲಿ ಕೆಲವು ಗಂಟೆಗಳ ಕಾಲ ಕಿಲೋಮೀಟರ್‌ಗಟ್ಟಲ್ಲೇ ವಾಹನಗಳ ಟ್ರಾಫಿಕ್ ಜಾಮ್ ಉಂಟಾಗಿತ್ತು.
Advertisement