

ಬೆಂಗಳೂರು: ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ಮಡಗಾಂವ್ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ.
06271 ಸಂಖ್ಯೆಯ ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 2ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಏಪ್ರಿಲ್ 3ರಂದು ಸಂಜೆ 5.30 ಕ್ಕೆ ಮಡಗಾಂವ್ ತಲುಪಲಿದೆ.
06272 ಸಂಖ್ಯೆಯ ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 5ರಂದು ಬೆಳಿಗ್ಗೆ 11 ಗಂಟೆಗೆ ಮಡಗಾಂವ್ ನಿಂದ ಹೊರಟು, ಏಪ್ರಿಲ್ 6ರಂದು ಬೆಳಗಿನ ಜಾವ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ಎಲ್ಲೆಲ್ಲಿ ನಿಲ್ಲಲಿವೆ?
ಈ ವಿಶೇಷ ರೈಲುಗಳು ಮಾರ್ಗಮಧ್ಯೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಾಣಕೋಣ ನಿಲ್ದಾಣಗಳಲ್ಲಿ ರೈಲು ನಿಲ್ಲಲಿದೆ.
ವಾಪಸ್ಸಾಗುವಾಗ 06272 ಸಂಖ್ಯೆಯ ರೈಲು ಯಶವಂತಪುರ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಎಸ್ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ರೈಲು ನಿಲ್ಲಲಿದೆ.
ಈ ವಿಶೇಷ ರೈಲುಗಳು ಒಟ್ಟು 19 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎರಡು ಎಸಿ 2-ಟೈರ್, ಎರಡು ಎಸಿ 3-ಟೈರ್, 9 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.
Advertisement