ತಿರುವಿನಲ್ಲಿ ವೇಗವಾಗಿ ಬಂದ ಬಸ್ ನಿಂದ ಕೆಳಗೆ ಬಿದ್ದ ಯುವತಿಯರು, ಸಿಸಿ ಕ್ಯಾಮೆರಾದಲ್ಲಿ video ಸೆರೆ

ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ.
Two students were seriously injured after falling from a KSRTC bus
ಬಸ್ ನಿಂದ ಕೆಳಗೆ ಬಿದ್ದ ಯುವತಿಯರು
Updated on

ಹಾಸನ: ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಅಪಘಾತ ಪ್ರಕರಣ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಆ ಪಟ್ಟಿಗೆ ಇದೀಗ ರಾಜ್ಯದ ವಿದ್ರಾವಕ ಘಟನೆ ಕೂಡ ಸೇರ್ಪಡೆಯಾಗಿದೆ.

ಹೌದು.. ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಲಗಳ ಪ್ರಕಾರ ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ಎಂಆರ್‌ಪಿಎಲ್ ಪೆಟ್ರೋಲ್ ಪಂಪ್ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡಿದೆ.

ಈ ವೇಳೆ ಬಾಗಿಲ ಬಳಿಯೇ ನಿಂತಿದ್ದ ಅಕ್ಕ ಮೊದಲು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಅವರನ್ನು ರಕ್ಷಿಸಲು ಹೋದ ತಂಗಿ ಕೂಡ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.

Two students were seriously injured after falling from a KSRTC bus
Bengaluru: ಪಾರ್ಕಿಂಗ್ ವಿಚಾರಕ್ಕೆ ಜಗಳ: ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ ಯುವಕ.. ಆಗಿದ್ದೇನು? Video

ಇಬ್ಬರೂ ವಿದ್ಯಾರ್ಥಿನಿಯರು ಗೇರುಕಟ್ಟೆಯಿಂದ ಬೆಳ್ತಂಗಡಿಯಲ್ಲಿರುವ ತಮ್ಮ ಶಾಲೆಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬಸ್ ರೇಷ್ಮೆ ರಸ್ತೆ ಸಮೀಪಿಸುತ್ತಿದ್ದಂತೆ, ಇದ್ದಕ್ಕಿದ್ದಂತೆ ಬಾಗಿಲು ತೆರೆದುಕೊಂಡ ಕಾರಣ ಇಬ್ಬರೂ ವಿದ್ಯಾರ್ಥಿಗಳು ಸಮತೋಲನ ಕಳೆದುಕೊಂಡು ರಸ್ತೆಗೆ ಬಿದ್ದರು.

ಅವರನ್ನು ತಕ್ಷಣ ಚಿಕಿತ್ಸೆಗಾಗಿ ಬೆಳ್ತಂಗಡಿ ಮತ್ತು ಉಜಿರೆಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ವಿದ್ಯಾರ್ಥಿಗಳಲ್ಲಿ ಒಬ್ಬರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದರು, ಮತ್ತೊಬ್ಬರು ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾಳೆ.

ನ್ಯಾಯತರ್ಪು ಗ್ರಾಮದ ಕಲೈತೊಟ್ಟುವಿನ ನಾಗರಾಜ್ ಮತ್ತು ರೂಪಾ ಅವರ ಮಕ್ಕಳಾದ ಗಾಯಗೊಂಡ ವಿದ್ಯಾರ್ಥಿಗಳು ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಈ ಇಡೀ ದೃಶ್ಯವು ರಸ್ತೆಯ ಪಕ್ಕದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಕ್ಷಕರ ಎದೆ ನಡುಗಿಸುವಂತಿದೆ. ಯುವತಿಯರು ರಸ್ತೆ ಮೇಲೆ ಬಿದ್ದ ತಕ್ಷಣ ಸ್ಥಳೀಯರು ಓಡಿ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಸ್ಸಿನ ನಿರ್ವಹಣೆ ಮತ್ತು ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com