ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ: 3.63 ಗಿಗಾವ್ಯಾಟ್‌ನೊಂದಿಗೆ ಜಲವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿ!

ಸಚಿವಾಲಯದ ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಮಾರ್ಚ್ 30 ರಂದು ಭಾರತದ ವಾರ್ಷಿಕ ಇಂಧನ ಅಂಕಿಅಂಶ ವರದಿ (annual Energy Statistics India 2026) ಬಿಡುಗಡೆ ಮಾಡಿದೆ.
Csual Images
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಟಾನ ಸಚಿವಾಲಯದ ಇತ್ತೀಚಿನ ಮಾಹಿತಿ ಪ್ರಕಾರ, ರಾಜ್ಯದ ಆರ್ಥಿಕ ಬೆಳವಣಿಗೆಯಾಗುತ್ತಿದ್ದು, 3.63 ಗಿಗಾವ್ಯಾಟ್ ವಿದ್ಯುತ್‌ನೊಂದಿಗೆ ಜಲವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಹೇಳಲಾಗಿದೆ. 2024-25 ರಲ್ಲಿ 3,726MW ಜೊತೆಗೆ ಸಣ್ಣ ಜಲವಿದ್ಯುತ್ ಯೋಜನೆ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ.

ಸಚಿವಾಲಯದ ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಮಾರ್ಚ್ 30 ರಂದು ಭಾರತದ ವಾರ್ಷಿಕ ಇಂಧನ ಅಂಕಿಅಂಶ ವರದಿ (annual Energy Statistics India 2026) ಬಿಡುಗಡೆ ಮಾಡಿದೆ. ಇದರಲ್ಲಿ ಭಾರತ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಬೃಹತ್ ಸಾಮರ್ಥ್ಯವನ್ನು ಹೊಂದಿದೆ. ಮಾರ್ಚ್ 31, 2025 ರಂತೆ ಇದು 47,04,043MW ಆಗಿದೆ.

ಇನ್ನೂ 2023-24ರಲ್ಲಿ 33,43,378MW ನಷ್ಟಿದ್ದ ಸೌರಶಕ್ತಿ ಉತ್ಪಾದನೆಯೂ 2024-25ರ ಆರ್ಥಿಕ ವರ್ಷದಲ್ಲಿ 7, 48,990 MWಗೆ ಏರಿಕೆಯಾಗಿದೆ. ಪವನ ಶಕ್ತಿಯಿಂದ 11,63,856MW ಮತ್ತು ಬೃಹತ್ ಜಲ ವಿದ್ಯುತ್ ಯೋಜನೆಗಳಿಗಳಿಂದ ಸುಮಾರು ಶೇ. 70 ರಷ್ಟು ಪಾಲು ಅಂದರೆ 1,33,410MW ನಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದೆ.

ನವೀಕರಿಸಬಹುದಾದ ಇಂಧನ ಉತ್ಪಾದನೆ:

ನವೀಕರಿಸಬಹುದಾದ ಇಂಧನ ಉತ್ಪಾದನೆಯ ಒಟ್ಟು ಸಾಮರ್ಥ್ಯದಲ್ಲಿ ಶೇಕಡಾ 70 ಕ್ಕಿಂತ ಹೆಚ್ಚು ಆರು ರಾಜ್ಯಗಳಲ್ಲಿ ಕೇಂದ್ರೀಕೃತವಾಗಿದೆ. ಈ ಪೈಕಿ ರಾಜಸ್ಥಾನ (23.70%), ಮಹಾರಾಷ್ಟ್ರ (14.26%), ಗುಜರಾತ್ (9.10%), ಆಂಧ್ರ ಪ್ರದೇಶ (9.1%), ಕರ್ನಾಟಕ (8.59%) ಮತ್ತು ಮಧ್ಯಪ್ರದೇಶದಲ್ಲಿ (8.09%) ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ವರದಿ ಹೇಳಿದೆ.

ಈ ಮಧ್ಯೆ ಕರ್ನಾಟಕವು 1,762MW ಜೊತೆಗೆ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ನಂತರ ಮೂರನೇ ಸ್ಥಾನದಲ್ಲಿದೆ ಎಂದು ಸಚಿವಾಲಯ ತಿಳಿಸಿದೆ. ಇನ್ನೂ ಬಯೋಮಾಸ್ ವಿದ್ಯುತ್ ಉತ್ಪಾದನೆಯಲ್ಲಿ, ಕರ್ನಾಟಕ 1,794MW ಉತ್ಪಾದನೆಯೊಂದಿಗೆ ದೇಶದಲ್ಲಿಯೇ ಏಳನೇ ಸ್ಥಾನದಲ್ಲಿದೆ. ಸೌರ ವಿದ್ಯುತ್ ಉತ್ಪಾದನೆ ಕ್ಷೇತ್ರದಲ್ಲಿ 24,700MW ನೊಂದಿಗೆ ರಾಜ್ಯ ಒಂಬತ್ತನೇ ಸ್ಥಾನದಲ್ಲಿದೆ.

ಬೃಹತ್ ಜಲವಿದ್ಯುತ್ ಯೋಜನೆಗಳು: ಬೃಹತ್ ಜಲವಿದ್ಯುತ್ ಯೋಜನೆಗಳ ವಿಷಯದಲ್ಲಿ ಕರ್ನಾಟಕ 4,414 MW ನೊಂದಿಗೆ ಆರನೇ ಸ್ಥಾನದಲ್ಲಿದೆ. ಇದರಲ್ಲಿ ಅರುಣಾಚಲ ಪ್ರದೇಶ 50,394 MW ನೊಂದಿಗೆ ಅಗ್ರಸ್ಥಾನದಲ್ಲಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಸಿಕ್ಕಿಂ ನಂತರದ ಸ್ಥಾನದಲ್ಲಿದೆ. ಪವನ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು 1,69,251 MW ನೊಂದಿಗೆ ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರದ ನಂತರ ನಾಲ್ಕನೇ ಸ್ಥಾನದಲ್ಲಿದೆ.

Csual Images
ಕೈಗಾ ಪರಮಾಣು ವಿದ್ಯುತ್ ಸ್ಥಾವರ: 5, 6ನೇ ಘಟಕಗಳ ನಿರ್ಮಾಣ ಕಾರ್ಯ ಆರಂಭ

ಇನ್ನೂ ಡೇಟಾವನ್ನು ಪರಿಶೀಲಿಸಬೇಕಾಗಿದೆ ಎಂದು ಇಂಧನ ಇಲಾಖೆಯ ಅಧಿಕಾರಿಗಳು ಹೇಳಿದರು. ರಾಜ್ಯವು 2026 ರಲ್ಲಿ 9,900MW ನಷ್ಟು ಸೌರ ವಿದ್ಯುತ್ ಉತ್ಪಾದನೆಯೊಂದಿಗೆ ಮುಂಚೂಣಿಯಲ್ಲಿದೆ ಮತ್ತು ಪ್ರಧಾನ ಮಂತ್ರಿ ಸೂರ್ಯ ಘರ್ ಮತ್ತು ಕುಸುಮ್-ಬಿ ಮತ್ತು ಸಿ ಯೋಜನೆಗಳನ್ನು ಪ್ರೋತ್ಸಾಹಿಸುವ ಮೂಲಕ ಅದನ್ನು ಹೆಚ್ಚಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಪರಿಸರ ವ್ಯವಸ್ಥೆಯಲ್ಲಿಯೂ ಕರ್ನಾಟಕ ಮುಂಚೂಣಿಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com