ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!

ಬೆಸ್ಕಾಂ ಸಂಸ್ಥೆಯು ಸುಮಾರು 2000 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದು, ಇದನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಅಸ್ತು ಎಂದಿದೆ.
representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ ಗ್ರಾಹಕರಿಗೆ ಮೇ 1ರಿಂದ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಲಿದೆ. ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದ್ದು, ಇದು ಗ್ರಾಹಕರಿಗೆ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಉಂಟುಮಾಡಲಿದೆ.

ಈಗಾಗಲೇ ಗ್ಯಾಸ್ ಬೆಲೆ ಏರಿಕೆಯ ಬಿಸಿ ಅನುಭವಿಸುತ್ತಿರುವ ನಾಗರಿಕರಿಗೆ ಈ ವಿದ್ಯುತ್ ದರ ಏರಿಕೆ ಮತ್ತೊಂದು ಹೊಡೆತವಾಗಿದೆ. ಬೆಸ್ಕಾಂ ಸಂಸ್ಥೆಯು ಸುಮಾರು 2000 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದು, ಇದನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ (KERC) ಅಸ್ತು ಎಂದಿದೆ.

ಬೆಸ್ಕಾಂ ಅನುಭವಿಸುತ್ತಿರುವ ಆರ್ಥಿಕ ನಷ್ಟವೇ ಈ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ. 2024-25ರ ಆರ್ಥಿಕ ವರ್ಷದಲ್ಲಿ ಕೆಇಆರ್‌ಸಿ ವಿದ್ಯುತ್ ಮಾರಾಟದಿಂದ 34,084 ಕೋಟಿ ರೂ. ಆದಾಯದ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ವಾಸ್ತವವಾಗಿ ಸಂಗ್ರಹವಾದ ಆದಾಯ ಕೇವಲ 32,019 ಕೋಟಿ ರೂ. ಮಾತ್ರ. ಇದರಿಂದಾಗಿ ಬೆಸ್ಕಾಂಗೆ ಬರೊಬ್ಬರಿ 2,068 ಕೋಟಿ ರೂ. ಗಳಷ್ಟು ಆದಾಯದ ಕೊರತೆ ಉಂಟಾಗಿತ್ತು.

ಈ ನಷ್ಟವನ್ನು ತುಂಬಿಕೊಳ್ಳಲು ಈಗ ಗ್ರಾಹಕರ ಮೇಲೆ ಹೊರೆ ಹಾಕಲಾಗುತ್ತಿದೆ. ಇಂದಿನಿಂದ ಅನ್ವಯವಾಗುವಂತೆ ಮೀಟರ್ ರೀಡಿಂಗ್‌ಗೆ ಹೊಸ ದರಗಳು ಜಾರಿಗೆ ಬರಲಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳವಾಗಿರುವುದರಿಂದ, ತಿಂಗಳಿಗೆ ಸರಾಸರಿ 100 ರಿಂದ 200 ಯೂನಿಟ್ ಬಳಸುವ ಸಾಮಾನ್ಯ ಕುಟುಂಬಗಳ ಬಿಲ್‌ನಲ್ಲಿ ಗಮನಾರ್ಹ ಏರಿಕೆಯಾಗಲಿದೆ.

representational image
ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com