

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಶಿವಕುಮಾರ್ ಅವರು ಖುಷಿಯಲ್ಲಿ ಮಗಳು ಹಾಗೂ ಮೊಮ್ಮಳನ್ನ ನೋಡಲು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದೌಡಾಯಿಸಿದರು. 2021ರ ಫೆ.14 ರಂದು ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ ಜೊತೆ ಐಶ್ವರ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಐದು ವರ್ಷದ ಬಳಿಕ ದಂಪತಿಗೆ ಮಗುವಾಗಿದೆ.
Advertisement