ಮುಸ್ಲಿಮರ ಸಿಟ್ಟು ಶಮನ ಮಾಡಲು ಕಾಂಗ್ರೆಸ್ ಸರ್ಕಾರ 600 ಕೋಟಿ ರೂ ಅನುದಾನ ನೀಡಿತೇ? ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದೇನು? Video

ಅಲ್ಪಸಂಖ್ಯಾತರ ಮುನಿಸು ತಣಿಸಲು ಸರ್ಕಾರ, 2026-27 ಮತ್ತು 2027-28ನೇ ಸಾಲಿನಲ್ಲಿ ಅವರ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂಪಾಯಿ ವೆಚ್ಚದ ಕ್ರಿಯಾ ಯೋಜನೆಗೆ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಹೇಳಲಾಗುತ್ತಿದೆ.
H K Patil
ಹೆಚ್ ಕೆ ಪಾಟೀಲ್
Updated on

ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ಗೊಂದಲ ನಂತರ ಇಬ್ಬರು ಮುಸ್ಲಿಂ ನಾಯಕರ ರಾಜೀನಾಮೆಯಿಂದ ಕಾಂಗ್ರೆಸ್ ಪಕ್ಷ ಮುಸಲ್ಮಾನರ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಹೇಳಲಾಗುತ್ತಿತ್ತು. ಸಮುದಾಯ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ಹೊಂದಿದೆ ಎಂದು ರಾಜಕೀಯ ವಿಶ್ಲೇಷಕರು ಕೂಡ ಅಭಿಪ್ರಾಯಪಟ್ಟಿದ್ದರು.

ಇದೀಗ ಅಲ್ಪಸಂಖ್ಯಾತರ ಮುನಿಸು ತಣಿಸಲು ಸರ್ಕಾರ, 2026-27 ಮತ್ತು 2027-28ನೇ ಸಾಲಿನಲ್ಲಿ ಅವರ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂಪಾಯಿ ವೆಚ್ಚದ ಕ್ರಿಯಾ ಯೋಜನೆಗೆ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಹೇಳಲಾಗುತ್ತಿದೆ.

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಕೇಳಿದಾಗ ಕಾನೂನು ಸಚಿವ ಹೆಚ್ ಕೆ ಪಾಟೀಲ್ , 600 ಕೋಟಿ ರೂಪಾಯಿಗೆ ಸಂಬಂಧಿಸಿದ ಎಲ್ಲಾ ಪ್ರಸ್ತಾವನೆಗಳು ಬಂದಿರುವುದರಿಂದ ನಾವು ಕಾರ್ಯಯೋಜನೆಗೆ ಅನುಮೋದನೆ ನೀಡಿದ್ದೇವೆ.

ದಾವಣಗೆರೆ ದಕ್ಷಿಣ ಚುನಾವಣೆಯ ನಂತರ ಒಂದೇ ರಾತ್ರಿಗೆ ಕೂತು ತಕ್ಷಣ ಕಾರ್ಯಯೋಜನೆ ತಯಾರಿಸಲು ಸಾಧ್ಯವೇ ಎಂದು ಮಾಧ್ಯಮ ಪ್ರತಿನಿಧಿಗಳ ಬಳಿ ಕೇಳಿದರು. ಇತ್ತೀಚಿನ ಬೆಳವಣಿಗೆಗಳಿಂದ ಬೇಸರಗೊಂಡ ಮುಸ್ಲಿಮರನ್ನು ತೃಪ್ತಿಪಡಿಸಲು ಈ ಕ್ರಮವೇ ಎಂಬ ಪ್ರಶ್ನೆಗೆ ಅವರು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com