ಕುಣಿಗಲ್: ಅಕ್ರಮ ಸಂಬಂಧಕ್ಕೆ ಕುಟುಂಬವೇ ಬಲಿ: ಚಿನ್ನಾಭರಣ ಸಮೇತ ಪತ್ನಿ ಪರಾರಿ; ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ!

ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ಕುಣಿಗಲ್: ಹುತ್ರಿದುರ್ಗ ಹೋಬಳಿ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದ ಮಲ್ಲೇಶ್ವರ ಸ್ವಾಮಿ ದೇಗುಲದ ಅರ್ಚಕ ಶಿವಣ್ಣ (40), ಪುತ್ರರಾದ ಜೀವನ್ (10), ಪ್ರಾಣೇಶ್ (5) ಮೃತರು. ಮಕ್ಕಳನ್ನು ಉಸಿರು ಗಟ್ಟಿಸಿ ಕೊಂದು, ನಂತರ ಶಿವಣ್ಣ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಣ್ಣನ ಪತ್ನಿ ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ಒಂದು ವಾರದ ಹಿಂದೆ ಆಕೆ ತನ್ನ ಗಂಡ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜೊತೆ ಓಡಿಹೋಗಿದ್ದಳು. ಈ ಸಂಬಂಧ ಶಿವಣ್ಣ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದ.

Representational image
ಬಾಗಲಕೋಟೆ: ಅನೈತಿಕ ಸಂಬಂಧ; ಚಿಕ್ಕಪ್ಪನ ಮಗನನ್ನೇ ಬರ್ಬರವಾಗಿ ಕೊಂದ ಸಹೋದರ!

ಪೊಲೀಸರ ಮಧ್ಯಸ್ಥಿಕೆಯ ನಂತರ ಪತ್ನಿ ಮನೆಗೆ ಮರಳಿ ಬಂದಿದ್ದಳು. ಆದರೆ, ಮರುದಿನವೇ ಶಿವಣ್ಣ ಕೆಲಸಕ್ಕೆ ಹೋದ ಸಮಯ ನೋಡಿಕೊಂಡು, ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣದೊಂದಿಗೆ ಆಕೆ ಮತ್ತೆ ಪಲಾಯನ ಮಾಡಿದ್ದಾಳೆ.

ಪತ್ನಿಯ ಈ ನಡತೆಯಿಂದ ತೀವ್ರವಾಗಿ ಮನನೊಂದ ಶಿವಣ್ಣ, ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳೊಂದಿಗೆ ಸಾವಿನ ಹಾದಿ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.​ ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com