ಬೆಂಗಳೂರು: ಅನಾರೋಗ್ಯದಿಂದ ದಕ್ಷ ಅಧಿಕಾರಿ 39 ವರ್ಷದ SP ಲಾವಣ್ಯ ಹಠಾತ್‌ ನಿಧನ!

ಬೆಸ್ಕಾಂ ವಿಜಿಲೆನ್ಸ್ ವಿಭಾಗದಲ್ಲಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 2012ರ ಬ್ಯಾಚ್‌ನ ಅಧಿಕಾರಿ 39 ವರ್ಷದ ಲಾವಣ್ಯ ಬಿ.ಎನ್ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.
Lavanya BN
ಲಾವಣ್ಯ ಬಿಎನ್
Updated on

ಬೆಂಗಳೂರು: ಬೆಸ್ಕಾಂ ವಿಜಿಲೆನ್ಸ್ ವಿಭಾಗದಲ್ಲಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 2012ರ ಬ್ಯಾಚ್‌ನ ಅಧಿಕಾರಿ 39 ವರ್ಷದ ಲಾವಣ್ಯ ಬಿ.ಎನ್ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಳೆದ ಕೆಲವು ಸಮಯದಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಲಾವಣ್ಯ ಬೆಂಗಳೂರಿನ ಕಾಳಿಂಗ ರಸ್ತೆಯಲ್ಲಿರುವ ಎಚ್‌ಸಿಜಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಮಧ್ಯಾಹ್ನ ಸುಮಾರು 2:30ರ ವೇಳೆಗೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದ ಲಾವಣ್ಯ ಅವರು, ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ವಾಸವಾಗಿದ್ದರು. ಲಾವಣ್ಯ ಅವರ ಸಾವಿಗೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.

Lavanya BN
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು; ಅಧಿಕೃತ ಆದೇಶ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com