ಸಚಿವ ಜಮೀರ್ ಮನೆಗೇ ಖನ್ನ ಹಾಕಿದ ಖದೀಮರು: 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ

ಏಪ್ರಿಲ್ 15 ರಂದು ಸಚಿವರ ಪುಲಕೇಶಿನಗರದ ನಿವಾಸದಲ್ಲಿ ಕಳ್ಳತನ ನಡೆದಿದ್ದು, ನಂತರ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
Two held for theft of gold ornaments worth Rs 1.13 cr at Minister Zameer Ahmed Khan's house
ಜಮೀರ್ ಅಹ್ಮದ್ ಖಾನ್ ಅವರ ಮನೆ
Updated on

ಬೆಂಗಳೂರು: ಕಳೆದ ತಿಂಗಳು ವಸತಿ ಸಚಿವ ಬಿ. ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಮನೆಯಲ್ಲೇ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣದ ಕಳ್ಳತನ ನಡೆದಿದೆ.

ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಏಪ್ರಿಲ್ 15 ರಂದು ಸಚಿವರ ಪುಲಕೇಶಿನಗರದ ನಿವಾಸದಲ್ಲಿ ಕಳ್ಳತನ ನಡೆದಿದ್ದು, ನಂತರ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

Two held for theft of gold ornaments worth Rs 1.13 cr at Minister Zameer Ahmed Khan's house
ಬೆಂಗಳೂರು: ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಪರಾರಿ! Video

ಅಚ್ಚರಿಯ ವಿಚಾರವೆಂದರೆ, ಹೊರಗಿನವರಾರೂ ಈ ಕೃತ್ಯ ಎಸಗಿಲ್ಲ. ಬದಲಾಗಿ ಸಚಿವರ ತಾಯಿಯ ಸ್ವಂತ ರಕ್ತಸಂಬಂಧಿಯೇ ಈ ಕಳ್ಳತನದ ಮಾಸ್ಟರ್ ಮೈಂಡ್ ಆಗಿದ್ದಾನೆ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮದುವೆ ಉಡುಗೊರೆಯಾಗಿ ಸ್ವೀಕರಿಸಿದ ಮತ್ತು ಉಳಿತಾಯದ ಮೂಲಕ ಖರೀದಿಸಿದ ಚಿನ್ನಾಭರಣಗಳನ್ನು ಕೋಣೆಯ ಕಪಾಟಿನಲ್ಲಿ ಇಡಲಾಗಿತ್ತು ಎಂದು ಸಚಿವರ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಪರಿಶೀಲಿಸಿದಾಗ, ಸುಮಾರು 1 ಕೆಜಿ 300 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುವುದು ಕಂಡುಬಂದಿದೆ.

ಸಂಬಂಧಿಕರು ತಮ್ಮ ಮನೆಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರು ಮತ್ತು ಸಂಬಂಧಿಕರಲ್ಲಿ ಒಬ್ಬರು ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಲಾಗಿತ್ತು ಎಂದು ಸಚಿವರ ತಾಯಿ ದೂರಿನಲ್ಲಿ ತಿಳಿಸಿದ್ದರು. ಇದರ ಆಧಾರದ ಮೇಲೆ, ಮನೆ ಕಳ್ಳತನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆಯ ಸಮಯದಲ್ಲಿ ಪೊಲೀಸರು ಹಲವು ಕೋನಗಳಲ್ಲಿ ಪರಿಶೀಲಿಸಿದರು.

ಪ್ರಕರಣವನ್ನು ಭೇದಿಸಿರುವ ಶಿವಾಜಿನಗರ ಠಾಣೆ ಪೊಲೀಸರು, ಇಬ್ಬರು ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ಅಮೀರ್ ಹಾಗೂ ಅಮಿರ್ ಅಹ್ಮದ್ ಬಂಧಿತ ಆರೋಪಿಗಳು. ಇವರಲ್ಲಿ ಸೈಯದ್ ಅಮೀರ್, ಸಚಿವ ಜಮೀರ್ ಅವರ ತಾಯಿಗೆ ಅತ್ಯಂತ ಹತ್ತಿರದ ಸಂಬಂಧಿ. ಮತ್ತೊಬ್ಬ ಆರೋಪಿ ಅಮಿರ್ ಅಹ್ಮದ್, ಸೈಯದ್ ಜೊತೆ ಟ್ರಾವೆಲ್ಸ್ ಉದ್ಯಮದಲ್ಲಿ ಪಾಲುದಾರನಾಗಿದ್ದ. ಇಬ್ಬರೂ ಸೇರಿ ಈ ಖತರ್ನಾಕ್ ಪ್ಲಾನ್ ಮಾಡಿದ್ದಾರೆ. ಸದ್ಯ ಬಂಧಿತರಿಂದ ಪೊಲೀಸರು ಬರೋಬ್ಬರಿ 1 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ 759 ಗ್ರಾಂ ಚಿನ್ನಾಭರಣಗಳನ್ನು ರಿಕವರಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com