IPL 2026: ಶಾಸಕರ ಟಿಕೆಟ್ ದಾಹಕ್ಕೆ ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್‌ಗೆ ಶಿಫ್ಟ್; ಡಿಕೆಶಿ ಹೇಳಿದ್ದೇನು?

ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವರದಿಗಳನ್ನು ತಳ್ಳಿಹಾಕಿದರು.
D K Shivakumar
ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ 2026ರ ಫೈನಲ್ ಪಂದ್ಯವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುಜರಾತ್ ನ ಅಹಮದಾಬಾದ್‌ಗೆ ಸ್ಥಳಾಂತರಿಸಿದೆ.

ಶಾಸಕರ ಟಿಕೆಟ್ ಬೇಡಿಕೆ, ಚಿಕ್ಕ ಕ್ರೀಡಾಂಗಣ ಮತ್ತು ಇತರ ಕಾರಣಗಳಿಂದ ಬಿಸಿಸಿಐ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಶಿಫ್ಟ್ ಮಾಡಿದೆ ಎಂದು ವರದಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

D K Shivakumar
IPL 2026: ಫೈನಲ್ ಪಂದ್ಯ ಬೆಂಗಳೂರು ಬದಲು ಅಹಮದಾಬಾದ್ ಗೆ ಶಿಫ್ಟ್, ಬಿಸಿಸಿಐ ಪ್ರಕಟ

ಅದು ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವರದಿಗಳನ್ನು ತಳ್ಳಿಹಾಕಿದರು.

ಇದೇ ವೇಳೆ ಸಿಎಂ, ಡಿಸಿಎಂ ದೆಹಲಿ ಭೇಟಿ ವಿಚಾರ ಕೇಳಿದಾಗ, ಹೈಕಮಾಂಡ್ ಕರೆದಾಗ ನಾವು ಹೋಗುತ್ತೇವೆ. ಕರೆಯದೇ ಹೋಗುವುದು ಸರಿಯಲ್ಲ. ಕರೆಯುತ್ತಾರೆ, ಕರೆದಾಗ ನಾವು ಹೋಗುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com