ಬೆಂಗಳೂರು: Cubbon Park, Lal Baghನಲ್ಲಿ ಈ ಬಾರಿ ಮಾವು-ಹಲಸು ಮೇಳ; ಯಾವಾಗ? ಇಲ್ಲಿದೆ ಮಾಹಿತಿ..

ಈ ಮೇಳದಲ್ಲಿ ಸುಮಾರು 70ಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಸ್ಥಾಪಿಸಲಾಗಿದ್ದು, ಕಾರ್ಬೈಡ್ ರಹಿತ ಮತ್ತು ಸಾವಯವ ಮಾವು-ಹಲಸುಗಳನ್ನು ರೈತರು ನೇರವಾಗಿ ಮಾರಾಟ ಮಾಡಲಿದ್ದಾರೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರಿನ ಮಾವು ಮತ್ತು ಹಲಸಿನ ಹಣ್ಣಿನ ಪ್ರಿಯರಿಗೆ ಈ ಬಾರಿ ಡಬಲ್ ಧಮಾಕಾ ಕಾಯುತ್ತಿದೆ. ನಗರದ ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್‌ನಲ್ಲಿ ಈ ವರ್ಷ ಮೊದಲ ಬಾರಿಗೆ ಎರಡು ಪ್ರತ್ಯೇಕ ಮಾವು ಮತ್ತು ಹಲಸಿನ ಮೇಳಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವತಿಯಿಂದ ಕಬ್ಬನ್ ಪಾರ್ಕ್‌ನಲ್ಲಿ ಇದೇ ಮೇ 8ರಿಂದ ಮೇ 17ರವರೆಗೆ ಮೊದಲ ಹಂತದಲ್ಲಿ ಮಾವು-ಹಲಸು ಮೇಳ ನಡೆಯಲಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್.ವೇದಮೂರ್ತಿ ಅವರು ಮಾಹಿತಿ ನೀಡಿ, ಮೇ 8ರಿಂದ 18ರವರೆಗೆ ಕಬ್ಬನ್ ಪಾರ್ಕ್‌ನಲ್ಲಿ ಮೇಳ ನಡೆಯಲಿದ್ದು, ಧಾರವಾಡ, ಮಂಡ್ಯ, ಮೈಸೂರು ಹಾಗೂ ದಕ್ಷಿಣ ಕರ್ನಾಟಕದ ರೈತರಿಗೆ ಇದು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಈ ಮೇಳದಲ್ಲಿ ಸುಮಾರು 70ಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಸ್ಥಾಪಿಸಲಾಗಿದ್ದು, ಕಾರ್ಬೈಡ್ ರಹಿತ ಮತ್ತು ಸಾವಯವ ಮಾವು-ಹಲಸುಗಳನ್ನು ರೈತರು ನೇರವಾಗಿ ಮಾರಾಟ ಮಾಡಲಿದ್ದಾರೆ. ರೈತರಿಗೆ ಉತ್ತಮ ಬೆಲೆ ಸಿಗದಿರುವ ಬಗ್ಗೆ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಇನ್ನೊಂದು ಮೇಳವನ್ನು ಲಾಲ್‌ಬಾಗ್‌ನಲ್ಲಿ ಇದೇ ತಿಂಗಳಲ್ಲಿ ನಡೆಸುವ ಯೋಜನೆಯಿದ್ದು, 100ಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಹಾಕಲು ಸಿದ್ಧತೆ ನಡೆಯುತ್ತಿದೆ. ದಿನಾಂಕವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಈ ಬಾರಿ ತೀವ್ರ ಬಿಸಿಲು ಮತ್ತು ವಾತಾವರಣದ ತೇವಾಂಶ ಕೊರತೆಯಿಂದಾಗಿ ಹಣ್ಣುಗಳು ಹೆಚ್ಚಾಗಿ ಬೀಳುವ ಸಮಸ್ಯೆ ಎದುರಾಗಿದೆ. ಇದರಿಂದ ಉತ್ಪಾದನೆ ಮತ್ತು ಗುಣಮಟ್ಟದ ಮೇಲೆ ಪರಿಣಾಮ ಬಿದ್ದಿದೆ. ಕಳೆದ ವರ್ಷ ಸುಮಾರು 15 ಲಕ್ಷ ಟನ್ ಉತ್ಪಾದನೆ ಇದ್ದರೆ, ಈ ಬಾರಿ 10 ಲಕ್ಷ ಟನ್ ಮಾತ್ರ ನಿರೀಕ್ಷಿಸಲಾಗಿದೆ. ಹಿಂದಿನ ವರ್ಷ ಸುಮಾರು 1,000 ಟನ್ ಹಣ್ಣುಗಳನ್ನು ರಫ್ತು ಮಾಡಲಾಗಿದ್ದರೆ, ಈ ಬಾರಿ ಇದುವರೆಗೆ 50ರಿಂದ 100 ಟನ್ ಮಾತ್ರ ರಫ್ತು ಸಾಧ್ಯವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com