ಮೇ.10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ: ಆರ್ಟ್ ಆಫ್ ಲಿವಿಂಗ್​ ಆಶ್ರಮಕ್ಕೆ ಭೇಟಿ..!

ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ಮೋದಿ ಅವರು ಆಶ್ರಮಕ್ಕೆ ಭೇಟಿ ನೀಡುತ್ತಿದ್ದು, ಇದೇ ವೇಳೆ ಆಶ್ರಮದ ಆವರಣದಲ್ಲಿ ನಿರ್ಮಿಸಲಾದ ಹೊಸ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ.
PM Modi
ಪ್ರಧಾನಿ ಮೋದಿ
Updated on

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಈ ಭೇಟಿ ವೇಳೆ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ಎಂದು ತಿಳಿದುಬಂದಿದೆ.

ಈ ವರ್ಷ ಆರ್ಟ್ ಆಫ್ ಲಿವಿಂಗ್ ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದು, ಸಂಸ್ಥೆಯ ಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ 70ನೇ ಹುಟ್ಟುಹಬ್ಬವನ್ನೂ ಇದೇ ಸಂದರ್ಭದಲ್ಲಿ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಶ್ರಮದಲ್ಲಿ ವಿಶೇಷ ಕಾರ್ಯಕ್ರಮಗಳು ಆಯೋಜಿಸಲಾಗುತ್ತಿವೆ.

ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ಮೋದಿ ಅವರು ಆಶ್ರಮಕ್ಕೆ ಭೇಟಿ ನೀಡುತ್ತಿದ್ದು, ಇದೇ ವೇಳೆ ಆಶ್ರಮದ ಆವರಣದಲ್ಲಿ ನಿರ್ಮಿಸಲಾದ ಹೊಸ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ.

ಈ ಧ್ಯಾನ ಮಂದಿರವು ಯೋಗ ಮತ್ತು ಧ್ಯಾನ ಅಭ್ಯಾಸಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

PM Modi
ಬಂಗಾಳದ ಗೆಲುವಿನೊಂದಿಗೆ ಇಂದು ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಕಮಲ ಅರಳಿದೆ: ಪ್ರಧಾನಿ ಮೋದಿ

ಆರ್ಟ್ ಆಫ್ ಲಿಂವಿಂಗ್ ಫೌಂಡೇಷನ್ ಕಳೆದ 45 ವರ್ಷಗಳಲ್ಲಿ ಯೋಗ, ಧ್ಯಾನ ಹಾಗೂ ಆಧ್ಯಾತ್ಮಿಕ ಶಿಕ್ಷಣದ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿಯೂ ಮಹತ್ವದ ಪಾತ್ರವಹಿಸಿದೆ. ನದಿ ಪುನರುಜ್ಜೀವನ, ಶಿಕ್ಷಣ ಅಭಿವೃದ್ಧಿ ಮತ್ತು ವಿಪತ್ತು ನಿರ್ವಹಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ.

150ಕ್ಕೂ ಹೆಚ್ಚು ದೇಶಗಳಲ್ಲಿ ತನ್ನ ಚಟುವಟಿಕೆಗಳನ್ನು ವಿಸ್ತರಿಸಿರುವ ಈ ಸಂಸ್ಥೆ, ಮಾನವೀಯ ಮೌಲ್ಯಗಳ ಪ್ರಸಾರ ಹಾಗೂ ಸಮುದಾಯ ಸೇವೆಯಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com