ಶೃಂಗೇರಿ ಅಂಚೆ ಮತ ಎಣಿಕೆ: ಅಕ್ರಮದ ಬಗ್ಗೆ FSL ತನಿಖೆ ನಡೆಸಬೇಕು; ಕೃಷ್ಣ ಭೈರೇಗೌಡ

ನಿನ್ನೆ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಮತ ಎಣಿಕೆಯ ಬಳಿಕ ಕೆಲವು ಪೋಸ್ಟಲ್ ಬ್ಯಾಲೆಟ್‌ಗಳಲ್ಲಿ ತಿದ್ದುಪಡಿ ನಡೆದಿದೆ. ಎಲ್ಲಾ ಪಕ್ಷಗಳ ಏಜೆಂಟ್‌ಗಳು ಒಪ್ಪಿ ಸಹಿ ಹಾಕಿದ ನಂತರವೂ ಮತಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
Krishna Byregowda
ಕೃಷ್ಣ ಬೈರೇಗೌಡ
Updated on

ಹಾಸನ: ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಕ್ರಮ ನಡೆದಿದ್ದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ನಿನ್ನೆ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಮತ ಎಣಿಕೆಯ ಬಳಿಕ ಕೆಲವು ಪೋಸ್ಟಲ್ ಬ್ಯಾಲೆಟ್‌ಗಳಲ್ಲಿ ತಿದ್ದುಪಡಿ ನಡೆದಿದೆ. ಎಲ್ಲಾ ಪಕ್ಷಗಳ ಏಜೆಂಟ್‌ಗಳು ಒಪ್ಪಿ ಸಹಿ ಹಾಕಿದ ನಂತರವೂ ಮತಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೆಲವು ಮತಗಳಲ್ಲಿ ಮೊದಲು ಒಂದು ಅಭ್ಯರ್ಥಿಗೆ ಹಾಕಿದ್ದ ಟಿಕ್ ಮಾರ್ಕ್‌ಗೆ ಕೆಳಭಾಗದಲ್ಲಿ ಬೇರೆ ಇಂಕ್ ಬಳಸಿ ಮತ್ತೊಂದು ಟಿಕ್ ಹಾಕಿ, ಆ ಮತಗಳನ್ನು ಅಮಾನ್ಯಗೊಳಿಸಲಾಗಿದೆ. ಸಂಪೂರ್ಣ ಕ್ರಿಮಿನಲ್ ಸಂಚು ಎಂದು ಟೀಕಿಸಿದ್ದಾರೆ.

Krishna Byregowda
'ಗೃಹಲಕ್ಷ್ಮಿ ಚುನಾವಣೆ ಲಕ್ಷ್ಮಿಯಾಗಿದೆ, ಎಲೆಕ್ಷನ್ ಟೈಂ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ': ಬಿ ವೈ ವಿಜಯೇಂದ್ರ

ಈ ಕುರಿತು ಸತ್ಯಾಂಶ ಬಹಿರಂಗವಾಗಲು ಫರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ (FSL)ಗೆ ಮತಪತ್ರಗಳನ್ನು ಕಳುಹಿಸಿ, ಮೇಲಿನ ಮತ್ತು ಕೆಳಗಿನ ಟಿಕ್ ಮಾರ್ಕ್‌ಗಳಿಗೆ ಬಳಸಿದ ಇಂಕ್ ಒಂದೇನಾ ಅಥವಾ ಬೇರೆನಾ ಎಂಬುದನ್ನು ಪರೀಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೆಲವು ಅಧಿಕಾರಿಗಳು ನಿರ್ದಿಷ್ಟ ಅಭ್ಯರ್ಥಿಗೆ ಬಂದ ಮತಗಳನ್ನು ಒಂದೇ ಬಂಡಲ್‌ನಲ್ಲಿ ಇಟ್ಟು, ಅದರಲ್ಲಿ ಟ್ಯಾಂಪರಿಂಗ್ ನಡೆದಿರುವ ಅನುಮಾನವಿದೆ. ಇದು ಮತ ಕಳ್ಳತನವಾಗಿದ್ದು, ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸ್ ತನಿಖೆ ನಡೆಸಿ ಸತ್ಯವನ್ನು ಬಹಿರಂಗಪಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಪಂಚರಾಜ್ಯಗಳ ಚುನಾವಣೆ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ನೇರ ಸ್ಪರ್ಧೆ ಇದ್ದರೂ ನಿರೀಕ್ಷೆಗೂ ಮೀರಿ ಕಾಂಗ್ರೆಸ್‌ಗೆ ಉತ್ತಮ ಫಲಿತಾಂಶ ಬಂದಿದ್ದು ಸಂತೋಷ ತಂದಿದೆ ಎಂದು ಹೇಳಿದರು.

ತಮಿಳುನಾಡಿನಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ನಿರೀಕ್ಷೆ ಇದ್ದರೂ, ಯುವ ಸಮುದಾಯ ಬದಲಾವಣೆಯನ್ನು ಬಯಸಿರುವುದು ಸ್ಪಷ್ಟವಾಗಿದೆ. ಅಲ್ಲಿನ ಜನರು ರಾಜಕೀಯ ವಿಶ್ಲೇಷಣೆಗಿಂತ ಸಮಾಜದ ಬದಲಾವಣೆಗೆ ಆದ್ಯತೆ ನೀಡಿದ್ದು, ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯವರು ಹಲವು ಸಂಸ್ಥೆಗಳ ದುರುಪಯೋಗದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ. ಮಮತಾ ಬ್ಯಾನರ್ಜಿ ಅವರಿಗೆ ಅನ್ಯಾಯವಾಗಿ ಹಿಂಸೆ ನೀಡಲಾಗಿದೆ. ಆದರೆ ಜನರ ತೀರ್ಪನ್ನು ಗೌರವಿಸುವುದು ಮುಖ್ಯವಾಗಿದ್ದು, ಅದನ್ನು ಸಮಚಿತ್ತದಿಂದ ಸ್ವೀಕರಿಸುತ್ತೇವೆ. ಒಟ್ಟಾರೆ, ಕೇರಳದ ಫಲಿತಾಂಶ ಕಾಂಗ್ರೆಸ್‌ಗೆ ಸಮಾಧಾನ ಮತ್ತು ಸಂತೋಷ ತಂದಿದೆ ಎಂದು ಕೃಷ್ಣ ಭೈರೇಗೌಡ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com