

ಬೆಂಗಳೂರು: ವಿಮಾನದಲ್ಲಿ 24 ವರ್ಷದ ಏರ್‌ಹೋಸ್ಟೆಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ 63 ವರ್ಷದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ 63 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಕೇರಳ ನಿವಾಸಿ ಜಾಕೋಬ್ ಅಲೆಕ್ಸಾಂಡರ್ (63) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಈ ಘಟನೆ ಬಹ್ರೇನ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ನಡೆದಿದೆ. ಬಹ್ರೇನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಗಲ್ಫ್ ಏರ್ (GF-280) ವಿಮಾನದಲ್ಲಿ ಮೇ 4 ರಂದು ಈ ಘಟನೆ ನಡೆದಿತ್ತು.
ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಮಯದಲ್ಲಿ, ಆರೋಪಿಯು ಹೊದಿಕೆಯ (blanket) ಒಳಗಿನಿಂದ ಕೈ ಹಾಕಿ 24 ವರ್ಷದ ಗಗನಸಖಿಗೆ ಅಸಭ್ಯವಾಗಿ ಸ್ಪರ್ಶಿಸಿದ್ದ ಎನ್ನಲಾಗಿದೆ.
ಅದಕ್ಕೆ ಆಕೆ ತಕ್ಷಣವೇ ವಿರೋಧ ವ್ಯಕ್ತಪಡಿಸಿ ಎಚ್ಚರಿಕೆ ನೀಡಿದ್ದು, ಘಟನೆ ಬಗ್ಗೆ ವಿಮಾನದ ಕ್ಯಾಪ್ಟನ್‌ಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಯು ಯಾವುದೇ ತಪ್ಪು ವರ್ತನೆ ನಡೆಸಿಲ್ಲ ಎಂದು ಹೇಳಿಕೊಂಡಿದ್ದು, ಅದನ್ನು “ಸ್ನೇಹಪೂರ್ವಕ ಸಂಪರ್ಕ” ಎಂದು ಸಮರ್ಥಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ವಿಮಾನವು ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಇಳಿದ ನಂತರ, ಕ್ಯಾಬಿನ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಆರೋಪಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ಗಗನಸಖಿಯ ದೂರಿನ ಮೇರೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಆರೋಪಿಯನ್ನು ಬಂಧಿಸಿ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 75(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement