

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಗರದ ಹೃದಯ ಭಾಗದವಾದ ಎಂಜಿ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಹೃದಯವಿದ್ರಾವಕ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಅನಿಲ್ ಕುಂಬ್ಳೆ ಜಂಕ್ಷನ್‌ನಲ್ಲಿ ಸಂಭವಿಸಿದ ಹಿಟ್ ಅಂಡ್ ಅಪಘಾತದಲ್ಲಿ 50 ವರ್ಷದ ವ್ಯಕ್ತಿ ಶ್ರೀನಿವಾಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಶ್ರೀನಿವಾಸ್ ಅವರು ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅತಿವೇಗದಲ್ಲಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ನಿರ್ಲಕ್ಷ್ಯದ ಚಾಲನೆಯಿಂದ ಸಾವಿಗೆ ಕಾರಣವಾದ ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106 ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅಪರಾಧಿ ವಾಹನವನ್ನು ಗುರುತಿಸಲು ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement