

ಬೆಳಗಾವಿ: ಕೇವಲ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ನೇಣಿಗೆ ಶರಣಾದ ದಾರುಣ ಘಟನೆ ಬೆಳಗಾವಿಯ ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ.
ಸಾವಿಗೆ ಶರಣಾದ ಯುವತಿಯನ್ನು ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ (21) ಎಂದು ಗುರುತಿಸಲಾಗಿದೆ.
ಈ ಯುವತಿ ಅಂತಿಮ ವರ್ಷದ ಬಿಎಸ್‌ಸಿ ಓದುತ್ತಿದ್ದಳು. ದಿಢೀರ್ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿದ್ದುಕೊಂಡು ಯುವತಿ ವ್ಯಾಸಾಂಗ ಮಾಡುತ್ತಿದ್ದಳು. ಇತ್ತೀಚೆಗೆ ಆಕೆಯ ಕುಟುಂಬಸ್ಥರು ಪೊಲೀಸ್ ಪೇದೆಯೊಬ್ಬರ ಜೊತೆ ಮದುವೆ ನಿಶ್ಚಯ ಮಾಡಿದ್ದರು.
ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಸಿಪಿಐ ಉಸ್ಮಾನ್ ಆವಟಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Advertisement