ಪಂಚಭೂತಗಳಲ್ಲಿ 'ಬಡವರ ಬಂಧು' ಸಚಿವ ಡಿ. ಸುಧಾಕರ್ ಲೀನ!

ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದರು.
ಸುಧಾಕರ್ ಪಂಚಭೂತಗಳಲ್ಲಿ ಲೀನ
ಸುಧಾಕರ್ ಪಂಚಭೂತಗಳಲ್ಲಿ ಲೀನ
Updated on

ಚಿಕ್ಕಬಳ್ಳಾಪುರ: ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದರು. ಇಂದು ಪಾವಗಡ ರಸ್ತೆಯ ಜೈನ ಮುಕ್ತಿಧಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಿತು. ಪುತ್ರ ಸುಹಾಸ್ ಅಂತಿಮ ಕ್ರಿಯೆಗಳನ್ನು ನಡೆಸಿದರು. ಜೈನ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸಲಾಗಿದ್ದು ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಿದರು. ಸಚಿವ ಡಿ. ಸುಧಾಕರ್ ಅವರು ಪಂಚಭೂತಗಳಲ್ಲಿ ಲೀನವಾದರು. ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು.

ಸುಧಾಕರ್ ಪಂಚಭೂತಗಳಲ್ಲಿ ಲೀನ
ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ: ಬೆಂಗಳೂರಿಗೆ ದೌಡಾಯಿಸಿದ NIA, ಓರ್ವ ಆರೋಪಿಯ ಬಂಧನ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com