Gruha Lakshmi: ಬಾಕಿ ಕಂತು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಏಪ್ರಿಲ್ ತಿಂಗಳ ಕಂತು ಕೂಡ ಇನ್ನು ಹತ್ತು ದಿನಗಳೊಳಗೆ ಫಲಾನುಭವಿಗಳಿಗೆ ತಲುಪಲಿದೆ ಎಂದು ತಿಳಿಸಿದ್ದಾರೆ.
Minister Laxmi Hebbalkar
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Updated on

ಬೆಳಗಾವಿ: ಗೃಹ ಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಬಾಕಿ ಉಳಿದಿರುವ ಕಂತು ಇನ್ನು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಏಪ್ರಿಲ್ ತಿಂಗಳ ಕಂತು ಕೂಡ ಇನ್ನು ಹತ್ತು ದಿನಗಳೊಳಗೆ ಫಲಾನುಭವಿಗಳಿಗೆ ತಲುಪಲಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಕನೂರ ಗ್ರಾಮದಲ್ಲಿ ನಡೆದ ಶ್ರೀ ಮಹಾಲಕ್ಷ್ಮೀ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

Minister Laxmi Hebbalkar
Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

ಯಾರ ಹೆಸರನ್ನೂ ಉಲ್ಲೇಖಿಸದೆ, ಕ್ಷೇತ್ರದ ಹಿಂದಿನ ಪ್ರತಿನಿಧಿಗಳ ವಿರುದ್ಧ ಸಚಿವೆ ಟೀಕಿಸಿ, ಅವರು ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇವಲ “ಹಿಂದುತ್ವ ರಾಜಕಾರಣ”ಕ್ಕೆ ಮಾತ್ರ ಒತ್ತು ನೀಡಿದರು ಎಂದು ಆರೋಪಿಸಿದರು.

ಎಲ್ಲಾ ಕ್ಷೇತ್ರಗಳಲ್ಲೂ ಉನ್ನತ ಮಟ್ಟದ ಅಭಿವೃದ್ಧಿ ಸಾಧಿಸುವ ಮೂಲಕ ಈ ಕ್ಷೇತ್ರವನ್ನು ಬಾರಾಮತಿ ಮಾದರಿಯಲ್ಲಿ ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ಕನಸು ಹೊಂದಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com