ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಅವಕಾಶ: ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಆದೇಶ!

ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಅವಕಾಶ: ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಆದೇಶ!
Updated on

ಬೆಂಗಳೂರು: ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ.

ಸಾಮಾನ್ಯವಾಗಿ ವಿದ್ಯಾರ್ಥಿಗಳು ಜನಿವಾರ, ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ಪೇಟ ಅಥವಾ ಟರ್ಬನ್, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ ಸಮವಸ್ತ್ರ ಜೊತೆಗೆ ಧರಿಸಬಹುದು. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು. ಸಮವಸ್ತ್ರ ಬದಲಿಸುವ, ಮಾರ್ಪಡಿಸುವ ಅಥವಾ ವಿಫಲಗೊಳಿಸುವಂತಿರಬಾರದು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com