Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಆಲಿಕಲ್ಲು ಮಳೆ ಬೀಳುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಒಳನಾಡಿನಲ್ಲಿ ನಾಳೆ ಮತ್ತು ಮೇ.15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಮಳೆಯಾಗುವ ನಿರೀಕ್ಷೆಯಿದೆ.

ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮೇ 14 ರಿಂದ 16 ರವರೆಗೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆ ಸಾಧ್ಯತೆಯಿದೆ.

Representational image
Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆ

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನಾಳೆ ದಾವಣಗೆರೆ, ವಿಜಯನಗರ, ಶಿವಮೊಗ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಂಜಿನ ಕಲ್ಲುಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಈ ವಾರಾಂತ್ಯಕ್ಕೆ ಅಂಡಮಾನ್ ಪ್ರವೇಶಿಸಲಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com