2022ರ BJP ಸರ್ಕಾರದ ಆದೇಶ ವಾಪಸ್: ಕೇಸರಿ ಶಾಲು ಇಲ್ಲ, ಹಿಜಾಬ್​​ಗೆ ಅವಕಾಶ!

2022ರಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: 2022ರಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದ್ದು, ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಕಾನೂನು ಸಮರಕ್ಕೂ ಕಾರಣವಾಗಿತ್ತು. ಇದೀಗ ರಾಜ್ಯ ಸರ್ಕಾರ ಹಿಜಾಬ್ ವಿಚಾರದಲ್ಲಿ ತನ್ನ ನಿಲುವನ್ನು ಬದಲಿಸಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅನುಮತಿ ನೀಡಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.

ಸಂಗ್ರಹ ಚಿತ್ರ
ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಅವಕಾಶ: ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಆದೇಶ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com