

ಮಂಗಳೂರು: 35 ಲಕ್ಷ ರೂ ಮೌಲ್ಯದ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ರಂದು ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಸುಹಾನ(21)ಳನ್ನು ಬಂಧಿಸಲಾಗಿದೆ.
ಬಂಧಿತೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. 35 ಲಕ್ಷ ರೂ ಮೌಲ್ಯದ ಹೈಡ್ರೋವಿಡ್ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾದಕ ವಸ್ತುವನ್ನು ಚೆನ್ನೈ ನಿಂದ ತರಿಸಿಕೊಂಡು ಮಾರಾಟ ಮಾಡಿ ಹಣಗಳಿಸುವ ಉದ್ದೇಶ ಹೊಂದಿದ್ದಳು. ಬಂಧಿತಳ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ .
ಕೇವಲ 21 ವರ್ಷದ ಈ ವಿದ್ಯಾರ್ಥಿನಿ ಈಗಾಗಲೇ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.
ಈಕೆಯ ಮೇಲೆ ಈ ಹಿಂದೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಲ್ಲದೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯಲ್ಲೂ ಈಕೆಯ ವಿರುದ್ಧ ಮಾದಕ ದ್ರವ್ಯ ಸಾಗಾಟದ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ
Advertisement