Bengaluru: ಮನೆ ಬಾಡಿಗೆ ಪಡೆದು ಹೈಟೆಕ್ ವೇಶ್ಯಾವಾಟಿಕೆ: ಇಬ್ಬರ ಬಂಧನ, 3 ಮಹಿಳೆಯರ ರಕ್ಷಣೆ

ಸಿಸಿಬಿ ಮಹಿಳಾ ರಕ್ಷಣಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ, ನಗರದಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಿದ್ದಾರೆ.
prostitution racket busted in Bengaluru
ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ (ಸಾಂದರ್ಭಿಕ ಚಿತ್ರ)TNIE
Updated on

ಬೆಂಗಳೂರು: ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸಿಸಿಬಿ (Central Crime Branch)ನ ಮಹಿಳಾ ರಕ್ಷಣಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ, ನಗರದಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಅಜಿತ್ ನಗರ ಮತ್ತು ವಿದ್ಯಾಮಾನ್ಯ ನಗರ ಪ್ರದೇಶಗಳ ಬಾಡಿಗೆ ಮನೆಗಳಲ್ಲಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

ಮಾಹಿತಿ ದಾರರು ನೀಡಿದ ಸುಳಿವಿನ ಆಧಾರದ ಮೇಲೆ, ಸಿಸಿಬಿ ಮಹಿಳಾ ರಕ್ಷಣಾ ದಳದ ಅಧಿಕಾರಿಗಳು ವಿವಿಧ ದಿನಾಂಕಗಳಲ್ಲಿ ಈ ಸ್ಥಳಗಳ ಮೇಲೆ ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

prostitution racket busted in Bengaluru
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್

ಇಬ್ಬರು ಆರೋಪಿಗಳು ವಶಕ್ಕೆ

ಕಾರ್ಯಾಚರಣೆಯ ವೇಳೆ, ಇತರ ಮಹಿಳೆಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರೆಂದು ಆರೋಪಿಸಲಾದ ಇಬ್ಬರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದರು. ಜೊತೆಗೆ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಮಹಿಳೆಯರನ್ನು ರಕ್ಷಿಸಲಾಯಿತು.

“ಹೆಚ್ಚು ಹಣ ಗಳಿಸುವ ಉದ್ದೇಶದಿಂದ, ಆರೋಪಿಗಳು ದೂರವಾಣಿ ಮೂಲಕ ಗ್ರಾಹಕರನ್ನು ಸಂಪರ್ಕಿಸಿ, ಅವರನ್ನು ಮನೆಗಳಿಗೆ ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾರೆ,” ಎಂದು ಸೀಮಂತ್ ಕುಮಾರ್ ಅವರ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆರೋಪಿಗಳ ವಿರುದ್ಧ ಸೋಲದೇವನಹಳ್ಳಿ ಪೊಲೀಸ್ ಠಾಣೆ ಹಾಗೂ ಬ್ಯಾಡರಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com