ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ವೀಡಿಯೊ ಚಿತ್ರೀಕರಿಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್; ಇಬ್ಬರ ಬಂಧನ

ಸಾಮಾನ್ಯವಾಗಿ CSAM ಪ್ರಕರಣಗಳಲ್ಲಿ ಇಂತಹ ವಿಡಿಯೊಗಳನ್ನು ಡೌನ್‌ಲೋಡ್ ಮಾಡಿಕೊಂಡವರು ಅಥವಾ ಸಂಗ್ರಹಿಸಿಕೊಂಡವರನ್ನು ಪೊಲೀಸರು ಬಂಧಿಸುತ್ತಾರೆ. ಆದರೆ ಈ ಪ್ರಕರಣದಲ್ಲಿ ನೇರವಾಗಿ ವಿಡಿಯೊ ಸೃಷ್ಟಿಸಿ ಅಪ್‌ಲೋಡ್ ಮಾಡಿದವರನ್ನೇ ಬಂಧಿಸಿರುವುದು ಅಪರೂಪವಾಗಿದೆ.
Representative Image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದರ ವಿಡಿಯೊ ಚಿತ್ರೀಕರಿಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಚಿತ್ರದುರ್ಗ ಜಿಲ್ಲೆ ಮೂಲದ ಹಾಗೂ ಬೆಂಗಳೂರಿನ ಕಗ್ಗಲೀಪುರ ಸಮೀಪದ ಕೈದಳ್ಳಿಪಾಳ್ಯದ ನಿವಾಸಿ ಕಿರಣ್ ಕುಮಾರ್ (29) ಮತ್ತು ಶಿವಮೊಗ್ಗ ಜಿಲ್ಲೆಯ ಆದಿತ್ಯ ಎಂ.ಕೆ (20) ಎಂದು ಗುರುತಿಸಲಾಗಿದೆ.

ಆರೋಪಿಗಳು ಚನ್ನಪಟ್ಟಣ ತಾಲೂಕಿನ ಮುದಗೆರೆ ಪ್ರದೇಶದ ಈಜುಕೊಳದಲ್ಲಿ ನಿರ್ವಹಣಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ರಾಷ್ಟ್ರೀಯ ಸೈಬರ್ ವರದಿ ವೇದಿಕೆ (NCRP) ಮೂಲಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಅಶ್ಲೀಲ ವಿಷಯ (CSAM) ಸೃಷ್ಟಿಸಿ ಆನ್‌ಲೈನ್‌ನಲ್ಲಿ ಹಂಚಲಾಗುತ್ತಿದೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮೇ 10ರಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನಿಖೆ ವೇಳೆ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು, ಅದರ ದೃಶ್ಯಗಳನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿ ಇಂಟರ್‌ನೆಟ್‌ನಲ್ಲಿ ಅಪ್‌ಲೋಡ್ ಮಾಡಿರುವುದು ಬೆಳಕಿಗೆ ಬಂದಿದೆ.

Representative Image
Bengaluru: ಬಾಡಿಗೆಗೆ ಮನೆ ಪಡೆದು ಹೈಟೆಕ್ ವೇಶ್ಯಾವಾಟಿಕೆ; ಇಬ್ಬರ ಬಂಧನ, 3 ಮಹಿಳೆಯರ ರಕ್ಷಣೆ

ಬಾಲಕಿಯರ ಹೇಳಿಕೆಗಳ ಆಧಾರದ ಮೇಲೆ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ಹಲವು ಗಂಭೀರ ಸೆಕ್ಷನ್‌ಗಳನ್ನು ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ಪ್ರಮುಖ ಅಂಶವೆಂದರೆ, ಸಾಮಾನ್ಯವಾಗಿ CSAM ಪ್ರಕರಣಗಳಲ್ಲಿ ಇಂತಹ ವಿಡಿಯೊಗಳನ್ನು ಡೌನ್‌ಲೋಡ್ ಮಾಡಿಕೊಂಡವರು ಅಥವಾ ಸಂಗ್ರಹಿಸಿಕೊಂಡವರನ್ನು ಪೊಲೀಸರು ಬಂಧಿಸುತ್ತಾರೆ. ಆದರೆ ಈ ಪ್ರಕರಣದಲ್ಲಿ ನೇರವಾಗಿ ವಿಡಿಯೊ ಸೃಷ್ಟಿಸಿ ಅಪ್‌ಲೋಡ್ ಮಾಡಿದವರನ್ನೇ ಬಂಧಿಸಿರುವುದು ಅಪರೂಪವಾಗಿದೆ ಎಂದು ಸೈಬರ್ ಕಮಾಂಡ್ ಡಿಜಿಪಿ ಪ್ರಣಬ್ ಮೊಹಾಂತಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊ ಚಿತ್ರೀಕರಣಕ್ಕೆ ಬಳಸಲಾಗಿದೆ ಎನ್ನಲಾದ ಮೂರು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ಮೇ 12ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com