ಬೆಂಗಳೂರಿಗೆ ವರುಣಾಘಾತ: ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ; ಯೆಲ್ಲೋ ಅಲರ್ಟ್‌ ಘೋಷಿಸಿದ IMD

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಸಿದೆ.
Bengaluru Rains
ಸಂಗ್ರಹ ಚಿತ್ರ
Updated on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Bengaluru Rains
ಕಾಳಿ ನದಿ ದಡದಲ್ಲಿ ಮರಿಗಳ ಕಾಯುತ್ತಿರುವ ತಾಯಿ ಮೊಸಳೆ: ವೀಡಿಯೋ ವೈರಲ್; ದೃಶ್ಯ ನೋಡಲು ಮುಗಿಬೀಳುತ್ತಿರುವ ಪ್ರವಾಸಿಗರು..!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com