ರಾಜ್ಯಸಭೆ ಚುನಾವಣೆ: ಬೆಳಗಾವಿಯಿಂದ ಮೋಹನ್ ಕಟರ್ಕಿ, ಅಂಜಲಿ ನಿಂಬಾಳ್ಕರ್ ಹೆಸರು ಮುನ್ನೆಲೆಗೆ, ಗೆದ್ದು ಬೀಗುವವರಾರು?

ಮೂಲಗಳ ಪ್ರಕಾರ, ಕರ್ನಾಟಕದಿಂದ ಖಾಲಿಯಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಮೇ 18ರಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.
Mohan Katarki , Anjali Nimbalkar
ಮೋಹನ್ ಕಟರ್ಕಿ, ಅಂಜಲಿ ನಿಂಬಾಳ್ಕರ್
Updated on

ಬೆಂಗಳೂರು/ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವಲ್ಲೇ ಇದೀಗ ಎಲ್ಲರ ಗಮನ ರಾಜ್ಯಸಭೆ ಚುನಾವಣೆಯತ್ತ ನೆಟ್ಟಿದೆ.

ಕರ್ನಾಟಕದಿಂದ ಖಾಲಿಯಾಗಲಿರುವ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮೂಲಗಳ ಪ್ರಕಾರ, ಕರ್ನಾಟಕದಿಂದ ಖಾಲಿಯಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಮೇ 18ರಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಬಿಜೆಪಿ ನಾಯಕರಾದ ಈರಣ್ಣ ಕಡಾಡಿ ಮತ್ತು ಕೆ. ನಾರಾಯಣ ಅವರ ಅವಧಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯಲಿದೆ.

ವಿಧಾನಸಭೆಯಲ್ಲಿ 135 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆಲ್ಲುವ ಸ್ಥಿತಿಯಲ್ಲಿದೆ. ನಾಲ್ಕನೇ ಸ್ಥಾನ ಬಿಜೆಪಿ ಪಾಲಾಗುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಕಾಂಗ್ರೆಸ್‌ನ ಒಂದು ಸ್ಥಾನ ಮಲ್ಲಿಕಾರ್ಜುನ ಖರ್ಗೆಗೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದ್ದು, ಉಳಿದ ಎರಡು ಸ್ಥಾನಗಳಿಗೆ ತೀವ್ರ ಲಾಬಿ ನಡೆಯುತ್ತಿದೆ.

Mohan Katarki , Anjali Nimbalkar
ರಾಜ್ಯಸಭೆ ಚುನಾವಣೆ ನೆಪ: ಅಯ್ಯೋ ಪಾಪ, ಡಿಸಿಎಂ ಆಗಿದ್ದಷ್ಟೇ ಲಾಭ; ಡಿಕೆಶಿಗೆ ಸದ್ಯಕ್ಕಿಲ್ಲ ಸಿಎಂ ಸ್ಥಾನ; ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುಂದಕ್ಕೆ!

ಈ ನಡುವೆ ಬೆಳಗಾವಿ ಭಾಗದಿಂದ ಹಿರಿಯ ಸುಪ್ರೀಂ ಕೋರ್ಟ್ ವಕೀಲ ಮೋಹನ್ ಕಟರ್ಕಿ ಹೆಸರು ಬಲವಾಗಿ ಕೇಳಿಬರುತ್ತಿದೆ. ಕರ್ನಾಟಕದ ಪರವಾಗಿ ಹಲವು ಅಂತರರಾಜ್ಯ ಜಲವಿವಾದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಮತ್ತು ನ್ಯಾಯಮಂಡಳಿಗಳ ಮುಂದೆ ವಾದ ಮಂಡಿಸಿರುವ ಕಾತರಕಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಮದುರ್ಗ ತಾಲ್ಲೂಕಿನವರಾದ ಅವರಿಗೆ ಮುಂಬೈ-ಕರ್ನಾಟಕ ಭಾಗದೊಂದಿಗೆ ಆಳವಾದ ನಂಟಿದೆ.

ಇನ್ನೊಬ್ಬ ಪ್ರಬಲ ಆಕಾಂಕ್ಷಿಯಾಗಿ ಖಾನಾಪುರ ಮಾಜಿ ಶಾಸಕಿಯೂ, ಎಐಸಿಸಿ ವಕ್ತಾರೆಯೂ ಆದ ಡಾ. ಅಂಜಲಿ ನಿಂಬಾಳ್ಕರ್ ಹೆಸರು ಮುನ್ನೆಲೆಗೆ ಬಂದಿದೆ.

ಇತ್ತೀಚಿನ ತಿಂಗಳುಗಳಲ್ಲಿ ದೆಹಲಿ ರಾಜಕೀಯ ವಲಯದಲ್ಲಿ ಹೆಚ್ಚು ಸಕ್ರಿಯರಾಗಿರುವ ಅವರು, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ಹೊಂದಿರುವ ಆಪ್ತತೆ ಹಿನ್ನೆಲೆ ಮಹಿಳಾ ಕೋಟಾದಡಿ ಅವರಿಗೆ ಅವಕಾಶ ಸಿಗಬಹುದು ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಮೋಹನ್ ಕಟರ್ಕಿ ಪರ ಬಲವಾದ ಬೆಂಬಲ ವ್ಯಕ್ತಪಡಿಸುತ್ತಿದ್ದು, ರಾಜ್ಯಸಭೆ ಕೇವಲ ರಾಜಕಾರಣಿಗಳಿಗೆ ಮಾತ್ರ ಸೀಮಿತವಾಗದೇ, ಕರ್ನಾಟಕದ ಹಿತಾಸಕ್ತಿಗಾಗಿ ಹೋರಾಡಿದ ವೃತ್ತಿಪರರಿಗೂ ಅವಕಾಶ ಸಿಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಮತ್ತೆ ರಾಜ್ಯಸಭೆ ಪ್ರವೇಶಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಯ ಬೆಂಬಲದೊಂದಿಗೆ ಎಚ್.ಡಿ. ದೇವೇಗೌಡ ಕೂಡ ಪ್ರಬಲ ಸ್ಪರ್ಧಿಯಾಗಿ ಉಳಿದಿದ್ದಾರೆ.

ಇದೇ ವೇಳೆ ಬಿಜೆಪಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೆಸರನ್ನೂ ಪರಿಗಣಿಸುತ್ತಿದೆ. ಆದರೆ, ಈರಣ್ಣ ಕಡಾಡಿಗೆ ಮತ್ತೊಮ್ಮೆ ಅವಕಾಶ ನೀಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com