

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಇಂದು (ಸೋಮವಾರ) ಬಸವನಗುಡಿಯ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್’ನಲ್ಲಿ ಕೇವಲ 1 ರೂಪಾಯಿಗೆ ಊಟ ವಿತರಿಸಲಾಗುತ್ತಿದೆ.
ಈ ವಿಶೇಷ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಹಾಗೂ ಜೆಡಿಎಸ್ ವಿಧಾನಪರಿಷತ್ ಉಪನಾಯಕ ಟಿ.ಎ.ಶರವಣ ಅವರು ಆಯೋಜಿಸಿದ್ದಾರೆ.
ಬಸವನಗುಡಿಯ ಹನುಮಂತನಗರದ 50 ಅಡಿ ರಸ್ತೆಯಲ್ಲಿರುವ ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಭೋಜನ ವ್ಯವಸ್ಥೆಯನ್ನು ನಡೆಸಲಾಗುತ್ತಿದೆ.
ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಸೀಸನ್-12’ ವಿಜೇತ ಗಿಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೇವೇಗೌಡರ ಜನ್ಮದಿನದ ಅಂಗವಾಗಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಒದಗಿಸುವ ಮೂಲಕ ವಿಶೇಷ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
Advertisement